ಮಾಜಿ DCM ಕೆಎಸ್ ಈಶ್ವರಪ್ಪ, ಪುತ್ರ ಹಾಗೂ ಸೊಸೆಗೆ ಲೋಕಾಯುಕ್ತ ಶಾಕ್: FIR ದಾಖಲು
ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ
ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು. ಅದರನ್ವಯ ಎಫ್‌ಐಆರ್ ದಾಖಲಿಸಲಾಗಿದೆ.
ಖಾಸಗಿ ದೂರಿನ ಅನ್ವಯ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ಆಗಿದೆ. ಪ್ರಕರಣದ ಬೆನ್ನಲ್ಲೇ ದಾಖಲೆಗಳನ್ನ ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. ದೂರು ನೀಡಿದ್ದ ವಕೀಲ ವಿನೋದ್‌ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ. ಜುಲೈ 4ರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭ ಆದಾಯ ಮೀರಿ ಆಸ್ತಿ ಗಳಿಸಿರುವುದಾಗಿ ಆರೋಪಿಸಿ ವಕೀಲ ಬಿ.ವಿನೋದ್ ಅವರು 2012ರಲ್ಲಿ ಶಿವಮೊಗ್ಗದ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಆದರೆ, ನ್ಯಾಯಾಲಯವು ಖಾಸಗಿ ದೂರು ಸಮರ್ಪಕವಾಗಿಲ್ಲ ಎಂದು ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ