ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!

ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು.
The law student Pavithra who jumped into Cauvery river being rescued by the officials.
ವಿದ್ಯಾರ್ಥಿನಿ ರಕ್ಷಣೆ ಮಾಡಿದ ಅಧಿಕಾರಿಗಳು.
Updated on

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಹಾರಿ, ನದಿಯ ಮಧ್ಯೆಯಿದ್ದ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿಯನ್ನು ಶುಕ್ರವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ಯವತಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ಎಂದು ಗುರ್ತಿಸಲಾಗಿದೆ.

ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು. ಶುಕ್ರವಾರ ಮುಂಜಾನೆ ಕಾಪಾಡಿ... ಎಂದು ಅವರು ಕೂಗಿಕೊಂಡಿದ್ದು ಈ ವೇಳೆ ರೈತರಿಗೆ ನದಿಯ ಮಧ್ಯೆ ವ್ಯಕ್ತಿಯೊಬ್ಬರು ಸಿಕ್ಕಿಕೊಂಡಿರುವುದು ತಿಳಿದಿದೆ.

ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಯುವತಿಯನ್ನು ರಕ್ಷಿಸಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನದಿಯಲ್ಲಿ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿನಿ ಕೊಚ್ಚಿ ಹೋಗುತ್ತಿದ್ದರು. ಆಕೆ ಅದೃಷ್ಟಶಾಲಿ ಎಂದು ಪಿಎಸ್ಐ ವಿನೋದ್ ಕುಮಾರ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.

The law student Pavithra who jumped into Cauvery river being rescued by the officials.
ಉತ್ತರ ಕನ್ನಡ: ಕಾಳಿ ನದಿ ದ್ವೀಪದಲ್ಲಿ ಸಿಲುಕಿಕೊಂಡಿದ್ದ ದನಗಾಹಿ ರಕ್ಷಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com