
ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಈ ಮೊಂಡಾಟ ಮೆರೆದಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ ಅವರು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಜಾತ್ರೆಯಲ್ಲಿ ನೂರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ.
FIR ದಾಖಲು
ಘಟನೆ ಸಂಬಂಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದ್ದು ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಂತೆಯೇ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ ಸಂಬಂಧ ಸಂತೋಷ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಾಗಿದ್ದು, FIR ದಾಖಲಾಗಿದೆ ಎಂದು ತಿಳಿದುಬಂದಿದೆ.
Advertisement