'ತಮಿಳಿನಿಂದ ಕನ್ನಡ ಹುಟ್ಟಿತು' ವಿವಾದ: ಕನ್ನಡ ವಿರೋಧಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್'ಗೆ ಕೋರ್ಟ್ ನಿರ್ಬಂಧ

ಕಮಲ್ ಹಾಸನ್ ಅಥವಾ ಅವರ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಇದು ಅನ್ವಯವಾಗುತ್ತದೆ ಎಂದು ಹೇಳಿದೆ.
Kamal Haasan
ಕಾಲಿವುಡ್ ನಟ ಕಮಲ್ ಹಾಸನ್
Updated on

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಟ ಕಮಲ ಹಾಸನ್ ಅವರಿಗೆ ಬೆಂಗಳೂರು ಸತ್ರ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಕಮಲ್ ಹಾಸನ್ ಕನ್ನಡ ವಿರೋಧಿ ಹೇಳಿಕೆ ನಿರ್ಬಂಧ ಕೋರಿ ಮಹೇಶ್ ಜೋಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 31ನೇ ಸಿಟಿ ಸಿವಿಲ್ ನ್ಯಾಯಾಲಯ, ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆಯನ್ನು ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದರಿಂದ ಅಥವಾ ಮುಂದಿನ ವಿಚಾರಣೆಯ ದಿನಾಂಕದವರೆಗೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಿದೆ.

ಕಮಲ್ ಹಾಸನ್ ಅಥವಾ ಅವರ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಇದು ಅನ್ವಯವಾಗುತ್ತದೆ ಎಂದು ಹೇಳಿದೆ.

ಅಲ್ಲದೆ, ಅರ್ಜಿ ಸಂಬಂಧ ಕಮಲ್ ಹಾಸನ್‌ ಅವರಿಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯವು, ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದೆ.

ಥಗ್‌ ಲೈಫ್‌ ಚಿತ್ರದ ಆಡಿಯೊ ಬಿಡುಗಡೆ ವೇಳೆ ಮಾತನಾಡಿದ್ದ ನಟ ಕಮಲ್‌ ಹಾಸನ್‌ ಅವರು, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದರು. ಈ ಹೇಳಿಗೆ ಭಾರೀ ವಿವಾದ ಸೃಷ್ಟಿಸಿತ್ತು. ಚಿತ್ರ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ಮತ್ತು ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ವಿರೋಧ ವ್ಯಕ್ತಪಡಿಸಿದ್ದವು. ಥಗ್‌ ಲೈಫ್‌ ಚಿತ್ರಕ್ಕೆ ಕರ್ನಾಟಕದಲ್ಲಿ ನಿಷೇಧ ಹೇರಲಾಗಿತ್ತು. ನಂತರ ಇದರ ವಿರುದ್ಧ ಕಮಲ್ ಹಾಸನ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಿ ಚಿತ್ರ ಬಿಡುಗಡೆಗೆ ಅನುವು ಮಾಡಿಕೊಟ್ಟಿತ್ತು.

Kamal Haasan
'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com