Mangaluru: ಕಲ್ಲು ತೂರಾಟ ತನಿಖೆಗೆ ಹೋದ ಪೊಲೀಸರಿಗೆ ಶಾಕ್; ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ!

ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ.
Police Shocked After Finding Obscene
ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ (ಸಾಂದರ್ಭಿಕ ಚಿತ್ರ)
Updated on

ಮಂಗಳೂರು: ಬಸ್ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣದ ತನಿಖೆಗೆ ತೆರಳಿದ್ದ ಪೊಲೀಸರೆ ದಂಗಾಗಿದ್ದು, ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಹೌದು.. ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಸುದ್ದಿಗೆ ಕಾರಣವಾಗಿದ್ದು, ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

Police Shocked After Finding Obscene
ಪತಿ ಹತ್ಯೆ: ಹೃದಯಾಘಾತವೆಂದು ಸುಳ್ಳಿನ ಕಥೆ ಕಟ್ಟಿದ್ದ ಪತ್ನಿ ಬಂಧನ!

ಕಲ್ಲು ತೂರಾಟ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು

ಇನ್ನು ಈ ಹಿಂದೆ ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸರು ಆರೋಪಿಯ ಮೊಬೈಲ್ ವಶಕ್ಕೆ ಪಡೆದಿದ್ದರು.

ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್​​ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ. ಈ ಪೈಕಿ ಆ ಭಾಗದ ಪ್ರಮುಖ ರಾಜಕಾರಣಿಯ ಅಶ್ಲೀಲ ವಿಡಿಯೋ ಕೂಡ ಪತ್ತೆಯಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com