ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯ ಪೂರ್ಣ; ಆಯೋಗದಿಂದ ಶೀಘ್ರದಲ್ಲೇ ವರದಿ ಸಲ್ಲಿಕೆ

ರಾಜ್ಯಾದ್ಯಂತ ಸಮೀಕ್ಷೆಯ ಸಮೀಕ್ಷಾ ಕಾರ್ಯ ಶೇ.90ರಷ್ಟು ಪೂಪರ್ಣಗೊಂಡಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50 ಪೂರ್ಣಗೊಂಡಿದೆ ಎನ್ನಲಾಗಿದೆ.
Representative image
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ಮೇ 5 ರಂದು ರಾಜ್ಯದಾದ್ಯಂತ ಪ್ರಾರಂಭಿಸಲಾಗಿದ್ದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಭಾನುವಾರ ಕೊನೆಗೊಂಡಿದೆ.

ಆಂತರಿಕ ಮೀಸಲಾತಿಯನ್ನು ನಿರ್ಧರಿಸಲು ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸಮೀಕ್ಷೆಯ ಮೇಲ್ವಿಚಾರಣೆಯನ್ನು ವಹಿಸಿತ್ತು. ಸಮೀಕ್ಷೆಯು ಮೇ 5 ರಂದು ಪ್ರಾರಂಭವಾಯಿತು. ಆರಂಭದಲ್ಲಿ ಮೇ 23 ರಂದು ಸಮೀಕ್ಷಾ ಕಾರ್ಯ ಅಂತ್ಯಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹಲವಾರು ಬಾರಿ ಮುಂದೂಡಲಾಗಿತ್ತು.

ರಾಜ್ಯಾದ್ಯಂತ ಸಮೀಕ್ಷೆಯ ಸಮೀಕ್ಷಾ ಕಾರ್ಯ ಶೇ.90ರಷ್ಟು ಪೂಪರ್ಣಗೊಂಡಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50 ಪೂರ್ಣಗೊಂಡಿದೆ ಎನ್ನಲಾಗಿದೆ.

ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು, ರಾಜ್ಯದಾದ್ಯಂತ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆದಿದ್ದರು, ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Representative image
ಜಾತಿ ಸಮೀಕ್ಷೆ: ಈವರೆಗೆ 1.48 ಕೋಟಿ ರೂ ವ್ಯಯಿಸಿದ BBMP; ಮನೆ-ಮನೆಗೆ ಸ್ಟಿಕ್ಕರ್‌ ಅಂಟಿಸಲು 70 ಲಕ್ಷ ರೂ ಖರ್ಚು!

ನಮಗೆ ಇನ್ನೂ ದತ್ತಾಂಶ ತಲುಪಿಲ್ಲ. ದತ್ತಾಂಶವನ್ನು ವಿಶ್ಲೇಷಿಸಬೇಕಿದ್ದು, ಸಮಯವನ್ನು ವ್ಯರ್ಥ ಮಾಡದೆ ವರದಿಯನ್ನು ಸಲ್ಲಿಸುತ್ತೇವೆಂದು ತಿಳಿಸಿದ್ದಾರೆ.

ಸಚಿವ ಕೆ.ಎಚ್. ​​ಮುನಿಯಪ್ಪ ಅವರು ಪ್ರತಿಕ್ರಿಯಿಸಿ, ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ. ಆಯೋಗವು ಶೀಘ್ರದಲ್ಲೇ ತನ್ನ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತದೆ. ನಂತರ ನಾವು ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ. ಮುಂಬರುವ ಶಾಸಕಾಂಗ ಅಧಿವೇಶನದಲ್ಲಿ ಇದನ್ನು ಮಂಡಿಸುತ್ತೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com