ಶ್ರೀರಂಗಪಟ್ಟಣ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಆಟೋ ಡ್ರೈವರ್

ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ನೋಡಲು ಬಂದಿದ್ದರು.
Mahesh
ಮೃತ ಮಹೇಶ್
Updated on

ಮಂಡ್ಯ: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.

ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ಎಂಬುವವರು ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಭಾನುವಾರ ಸಂಜೆ ಮಹೇಶ್‌ ಸ್ನೇಹಿತರೊಂದಿಗೆ ಕೆಆರ್‌ಎಸ್ ನೋಡಲು ಬಂದಿದ್ದರು.

ಸರ್ವಧರ್ಮ ಆಶ್ರಮದ ಬಳಿ ಫೋಟೋ ತೆಗೆಸಿಕೊಳ್ಳಲು ಹೋಗಿದ್ದಾರೆ. ಆ ವೇಳೆ ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಮಹೇಶ್‌ ಕೊಚ್ಚಿ ಹೋಗಿದ್ದಾರೆ. ಕೂಡಲೇ ಸ್ನೇಹಿತರು ನೆರವಿಗೆ ಬಂದರೂ ಸಾಧ್ಯವಾಗಲಿಲ್ಲ. ಕೊಚ್ಚಿ ಹೋದ ಮಹೇಶ್‌ ಪತ್ತೆಗಾಗಿ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದೆ. ಕೆಆರ್‌ಎಸ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Mahesh
ಮಂಡ್ಯ: ಸೇತುವೆಗೆ ಬೈಕ್ ಡಿಕ್ಕಿ; ಕಾಲುವೆಗೆ ಬಿದ್ದು ಇಬ್ಬರು ಸಾವು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com