
ಮೈಸೂರು: ಅತಿ ವೇಗವಾಗಿ ಬಂದ ಹಯಾಬುಸಾ ಸೂಪರ್‌ಬೈಕ್ ಜೊಮ್ಯಾಟೊ ಡೆಲಿವರಿ ಬಾಯ್‌ನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸಾವಿಗೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜುಲೈ 6ರಂದು ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಿಸಿಟಿವಿ ದೃಶ್ಯಗಳಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಬಂದ ಹಯಾಬುಸಾ ಬೈಕ್ ರಸ್ತೆಬದಿಯಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಬೈಕ್‌ಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮತ್ತು ಡೆಲಿವರಿ ಬಾಯ್ ಕೆಳಗೆ ಬಿದ್ದಿದ್ದಾನೆ.
ಜೊಮ್ಯಾಟೊ ಡೆಲಿವರಿ ಬಾಯ್ ಆಗಿದ್ದ ಕಾರ್ತಿಕ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಚಾಮರಾಜನಗರದ ಸೈಯದ್ ಸರೂನ್ ಸವಾರಿ ಮಾಡುತ್ತಿದ್ದ ಹಯಾಬುಸಾ, ಡಿಕ್ಕಿಯ ನಂತರವೂ ಹಲವಾರು ಮೀಟರ್‌ಗಳಷ್ಟು ಮುಂದೆ ಹೋಗಿ, ಪೆಟ್ರೋಲ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ.
ಕೂಡಲೇ ಸಯ್ಯದ್ ಸರೂನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆ ವೇಳೆಗಾಗಲೇ ಆತ ಸುಟ್ಟ ಗಾಯಗಳಿಂದ ಸಾವಿಗೀಡಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಎನ್ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement