Anekal: ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ Gang Rape; ಹಣಕ್ಕೆ ಡಿಮ್ಯಾಂಡ್!

ಬೆಂಗಳೂರಿನ ದೊಡ್ಡ ನಾಗಮಂಗಲ (Nagamangala) ಸಾಯಿ ಲೇಔಟ್​ನಲ್ಲಿ ಈ ಘಟನೆ ನಡೆದಿದೆ. ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
Woman gang-raped
ಅತ್ಯಾಚಾರ (ಸಾಂದರ್ಭಿಕ ಚಿತ್ರ)
Updated on

ಆನೇಕಲ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಬೆಂಗಳೂರಿನ ದೊಡ್ಡ ನಾಗಮಂಗಲ (Nagamangala) ಸಾಯಿ ಲೇಔಟ್​ನಲ್ಲಿ ಈ ಘಟನೆ ನಡೆದಿದೆ. ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್​ನಲ್ಲಿರುವ ತಮ್ಮ ಸ್ನೇಹಿತನ ಮನೆಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ಬಂದ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.

ಅತ್ಯಾಚಾರ ಮಾಡಿದ್ದಲ್ಲದೇ ಹಣಕ್ಕೂ ಡಿಮ್ಯಾಂಡ್

ಇನ್ನು ಅಚ್ಚರಿ ಎಂದರೆ ದುಷ್ಕರ್ಮಿಗಳು ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಬಳಿಕ ಮಹಿಳೆ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್​ನಿಂದ ಹಣ ನೀಡಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್​​ಗೆ ಹಾಕಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Woman gang-raped
ಚೀಟಿ ವ್ಯವಹಾರ, ಚಿನ್ನ ವಂಚನೆ: ಬೆಳಗಾವಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಶಂಕಿತರು ವಶಕ್ಕೆ

ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು, ಸಂತ್ರಸ್ತೆಯ ಮತ್ತು ಇವರ ಸ್ನೇಹಿತನ ಮೊಬೈಲ್ ಕಸಿದುಕೊಂಡಿದ್ದಾರೆ. ಸಾಲದಕ್ಕೆ ಮನೆಯಲ್ಲಿದ್ದ ಪ್ರಿಡ್ಜ್, ವಾಶಿಂಗ್ ಮೆಷಿನ್ ಹೊತ್ತೊಯ್ದಿದ್ದಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರಿಂದ ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com