
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪಾಠ ಕೇಳುತ್ತಿರುವಾಗಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ದೊಡ್ಡಹುಂಡಿ ಗ್ರಾಮದ ಲೇ.ನಾಗರಾಜು ಹಾಗೂ ನಾಗರತ್ನ ಅವರ ಪುತ್ರ ಮನೋಜ್ ಕುಮಾರ್(10) ಎಂದು ಗುರುತಿಸಲಾಗಿದೆ.
ಕಳೆದ ಎರಡು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಇಂದು ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ.
ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು ಎಂದು ತಿಳಿದುಬಂದಿದೆ.
Advertisement