
ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999(FEMA)ಯ ಸೆಕ್ಷನ್ 37ರಡಿಯಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾ ರೆಡ್ಡಿಗೆ ಸಂಬಂಧಿಸಿದ ಬೆಂಗಳೂರಿನ ಐದು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ಶಾಸಕ ಸುಬ್ಬಾರೆಡ್ಡಿ ಅವರು ಹಾಂಗ್ ಕಾಂಗ್, ಮಲೇಷ್ಯಾ ಮತ್ತು ಜರ್ಮನಿಯಾದ್ಯಂತ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಹೊಂದಿದ್ದಾರೆ, ಸರ್ಕಾರಕ್ಕೆ ದಾಖಲೆಗಳನ್ನು ತಿಳಿಸದೆ ವಾಹನಗಳು ಮತ್ತು ಆಸ್ತಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್ ಅಕೌಂಟ್, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ.
ಶಾಸಕ ಸುಬ್ಬಾರೆಡ್ಡಿ ಮನೆ ಸೇರಿದಂತೆ ಒಟ್ಟು ಬೆಂಗಳೂರಿನ 5 ಕಡೆಗಳಲ್ಲಿ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ.
ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Advertisement