ತಾವರೆಕೆರೆ ಅಪ್ರಾಪ್ತ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಕಾರ್ಪೆಂಟರ್ ಬಂಧನ

ಮಾದಕ ವಸ್ತುವಿನ ಪ್ರಭಾವದಲ್ಲಿ ಆರೋಪಿ ಅಪರಾಧ ಎಸಗಿದ್ದಾನೆನ್ನಲಾಗಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ, ನಂತರ ಆಕೆಯ ತಲೆಗೆ ಸಿಲಿಂಡಲ್ ನಿಂದ ಹೊಡೆದು, ಹತ್ಯೆ ಮಾಡಿದ್ದಾನೆ.
arrest
ಬಂಧನonline desk
Updated on

ಬೆಂಗಳೂರು: ತಾವರೆಕೆರೆಯಲ್ಲಿ ವರದಿಯಾಗಿದ್ದ ಅಪ್ರಾಪ್ತ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಯಲ್ಲಪ್ಪ (22) ಬಂಧಿತ ಆರೋಪಿ. ಬಾಲಕಿಯ ಮನೆಯ ಬಳಿ ಕೆಲಸ ಮಾಡುತ್ತಿದ್ದ ಆರೋಪಿ ಆಕೆಯ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ.

ಬಾಲಕಿಯ ಪೋಷಕರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಪ್ರತಿದಿನ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಡುತ್ತಿದ್ದರು. ಬಾಲಕಿ 6ನೇ ತರಗತಿಯ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಇನ್ನು ಬಾಲಕಿಯ ಸಹೋದರರು ಶಾಲೆಗೆ ಹೋಗುತ್ತಿದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಬಾಲಕಿ ಒಬ್ಬಂಟಿಯಾಗಿರುವುದನ್ನು ಆರೋಪಿ ಕಂಡುಕೊಂಡಿದ್ದ,

ಮಾದಕ ವಸ್ತುವಿನ ಪ್ರಭಾವದಲ್ಲಿ ಆರೋಪಿ ಅಪರಾಧ ಎಸಗಿದ್ದಾನೆನ್ನಲಾಗಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ, ನಂತರ ಆಕೆಯ ತಲೆಗೆ ಸಿಲಿಂಡಲ್ ನಿಂದ ಹೊಡೆದು, ಹತ್ಯೆ ಮಾಡಿದ್ದಾನೆ. ನಂತರ ಸಿಲಿಂಡರ್'ನ್ನು ಹೊತ್ತೊಯ್ದಿದ್ದು, ತಾವರೆಕೆರೆಯಲ್ಲಿ ಅದನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

arrest
ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಬುಧವಾರ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಈ ಘಟನೆ ನಡೆದಿದೆ. ಬಾಲಕಿಯ ಸಹೋದರ ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಬುಧವಾರ ರಾತ್ರಿ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com