ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಸಂದರ್ಭ ದಾರಿ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ, ಓರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
File image
ಸಂಗ್ರಹ ಚಿತ್ರ
Updated on

ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ಸಂದರ್ಭ ದಾರಿ ಮಧ್ಯೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ, ಓರ್ವನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತ್ಯಾಜ್ಯ ತೈಲ ಸಂಗ್ರಹ ಟ್ಯಾಂಕ್‌ನಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದ್ದು. ಕಾರ್ಮಿರಲ್ಲಿ ಒಬ್ಬರು ಕನ್ನಡಿಗರಾಗಿದ್ದು, ಇಬ್ಬರು ಹೊರರಾಜ್ಯದವರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

File image
ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಸಾವು, ಎಂಟು ಮಂದಿಗೆ ಗಾಯ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com