'Congress ಏನ್ ದಬಾಕಿದೆ': Siddaramaiah ಸರ್ಕಾರ, Guarantee ಯೋಜನೆ ಟೀಕಿಸಿದ್ದ ಮಹಿಳಾ ಅಧಿಕಾರಿ ಎತ್ತಂಗಡಿ!

ತುಮಕೂರಿನ ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಅವಹೇಳನಕಾರಿಯಾಗಿ ಟೀಕೆ ಮಾಡಿದ್ದ ವಿಡಿಯೋ ವ್ಯಾಪಕ ವೈರಲ್ ಆಗಿತ್ತು.
Woman officer who criticized Karnataka Congress government transferred
ಪಾವಗಡ ರಿಜಿಸ್ಟ್ರಾರ್ ರಾಧಮ್ಮ ವರ್ಗಾವಣೆ
Updated on

ತುಮಕೂರು: ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ದ ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ತುಮಕೂರಿನ ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಅವಹೇಳನಕಾರಿಯಾಗಿ ಟೀಕೆ ಮಾಡಿದ್ದ ವಿಡಿಯೋ ವ್ಯಾಪಕ ವೈರಲ್ ಆಗಿತ್ತು. ಇದೀಗ ಅಧಿಕಾರಿ ರಾಧಮ್ಮ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಈ ಹಿಂದೆ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಹಾಗೂ ನಿವೇಶನದ ಖಾತೆ ನೋಂದಣಿಗೆ ಸಂಬಂಧಪಟ್ಟಂತೆ ಇಲ್ಲಿನ ಉಪ ನೋಂದಣಾಧಿಕಾರಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಇಲಾಖೆಯ ಪ್ರತಿಯೊಂದು ಕೆಲಸಕ್ಕೆ ಇಂತಿಷ್ಟು ಲಂಚ ನೀಡುವ ಅನಿರ್ವಾಯತೆ ಸೃಷ್ಟಿಸಿದ್ದಾರೆ. ದಲ್ಲಾಳಿಗಳ ಹಾವಳಿಯಿಂದ ರೈತರು ಹಾಗೂ ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ ಎಂದು ಆರೋಪಿಸಿ ಎರಡು ದಿನಗಳ ಹಿಂದಷ್ಟೇ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದ್ದರು.

ಈ ವಿವಾದ ತಣ್ಣಗಾಗುವ ಮೊದಲೇ ಅಧಿಕಾರಿ ರಾಧಮ್ಮ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಟೀಕೆ ಮಾಡಿ ಅವಹೇಳನವಾಗಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ರಾಧಮ್ಮ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Woman officer who criticized Karnataka Congress government transferred
ಧರ್ಮಸ್ಥಳ ಪ್ರಕರಣ: ಸುಳ್ಳು ಮಾಹಿತಿ ವಿಡಿಯೋ ಪ್ರಸಾರ ಆರೋಪ; Youtuber ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು

ವೈರಲ್ ಆಗಿದ್ದ ವಿಡಿಯೋ

ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಮಾತನಾಡಿದ್ದ ವಿಡಿಯೋದಲ್ಲಿ, 'ಕಾಂಗ್ರೆಸ್ ಏನ್ ದಬ್ಬಾಕಿರೋದು? ಗಾಂಧಿಜೀ ಹೆಂಡತಿ ಮುಸ್ಲಿಂ, ಇಂದಿರಾಗಾಂಧಿ ಗಂಡ ಮುಸ್ಲಿಂ, ಸಂಪೂರ್ಣ ಅಧಿಕಾರ ಕಾಂಗ್ರೆಸ್‌ಗೆ ಕೊಟ್ಟಿದ್ರೆ ಇಷ್ಟೋತ್ತಿಗೆ ದೇಶವನ್ನು ಧೂಳಿಪಟ ಮಾಡಿ ನಮಗೆ ಕುಡಿಯೋಕೆ ನೀರು ಸಿಗ್ತಿರಲಿಲ್ಲ. ಸಿದ್ದರಾಮಯ್ಯ ಎಲ್ಲವನ್ನು ಫ್ರೀಯಾಗಿ ಹೆಣ್ಣು ಮಕ್ಕಳಿಗೆ ಕೊಟ್ಟ, ಎಲ್ಲಾ ದರ ಜಾಸ್ತಿ ಮಾಡಿ ಬರೆ ಎಳೆದು ಕೂರಿಸಿದ್ರು. ತರಕಾರಿ, ಹಣ್ಣು, ಹಾಲು, ಮಕ್ಕಳು ತಿನ್ನುವ ಬಿಸ್ಕೆಟ್, ಬೆಳೆ ಕಾಳು ಎಲ್ಲ ಒನ್ ಟು ಡಬಲ್ ಆಗಿದೆ. ಸಿದ್ದರಾಮಯ್ಯ ಆರ್ಟಿಕಲ್ ಹೇಳದೇ ಇರೋದು ಒಂದೇ 150 ಆರ್ಟಿಕಲ್ ಹೇಳೋದು ಒಂದೇಯಾ. ಹೆಂಗಸರು ಮನೆಲಿ ಇರದೇ ಬೀದಿ ಸುತ್ತುವ ಹಾಗೇ ಮಾಡಿದ್ದೆ ಸಿದ್ದರಾಮಯ್ಯ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com