
ಬೆಂಗಳೂರು: ಬೆಂಗಳೂರಿನ ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದ್ದು ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಸದ್ಯ ಎರಡು ಕಿಮೀ ಪ್ರಯಾಣಕ್ಕೆ ಆಟೋ ಮೀಟರ್ ದರ ಕನಿಷ್ಠ 30 ರೂಪಾಯಿ ಇದ್ದು ಆ ದರವನ್ನು 36 ರುಪಾಯಿಗೆ ಏರಿಕೆ ಮಾಡಲಾಗಿದೆ. ಈ ನೂತನ ದರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಕನಿಷ್ಠ ಪ್ರಯಾಣ ದರ ಬಳಿಕ ಪ್ರತಿ ಕಿಮೀ.ಗೆ 15 ರೂ.ನಿಂದ 18 ರೂ.ಗೆ ಏರಿಕೆ ಮಾಡಲಾಗಿದೆ.
Advertisement