
ಕಲಬುರಗಿ: ಮಾದಕದ್ರವ್ಯ ಸಾಗಾಣೆ ಆರೋಪದಲ್ಲಿ ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತರೂ ಆಗಿದ್ದಾರೆ.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ದಾರೆ. ನಿಷೇಧಿತ 120ಕ್ಕೂ ಹೆಚ್ಚು ಎನ್ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಈ ಪ್ರಕರಣದಲ್ಲಿ ತೌಸಿಫ್ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ (A2) ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ (A3) ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಲಿಂಗರಾಜ್ ಕಣ್ಣಿ ಈ ಹಿಂದೆ ಬಿಜೆಪಿಯಲ್ಲಿ ಇದ್ದರು. 2023 ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದರು.
Advertisement