ಕೇವಲ 2 ಸಾವಿರ ರೂ ಲಂಚಕ್ಕಾಗಿ ಕೆಲಸ ಕಳೆದುಕೊಂಡ ಪಿಡಿಒ: ಭ್ರಷ್ಟ ಅಧಿಕಾರಿಗೆ ಕಡ್ಡಾಯ ನಿವೃತ್ತಿ ನೀಡಿದ ಸರ್ಕಾರ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು.
representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ‘ಇ-ಸ್ವತ್ತು’ಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ 14x100 ಅಡಿ ಅಳತೆಯ ಮನೆಯೊಂದಿಗೆ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು. ಮಾವಿನಕಟ್ಟೆ ಗ್ರಾಮದ ನಿವಾಸಿ ರಂಗನಾಥ ಬಿ.ಎಚ್. ಅವರಿಂದ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಾಜ್ಯ ಸರ್ಕಾರವು ಜುಲೈ 31, 2023 ರಂದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 14 (ಎ) ಅಡಿಯಲ್ಲಿ ಅವರ ವಿರುದ್ಧದ ತನಿಖೆಯನ್ನು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಿತು. ಫೆಬ್ರವರಿ 18 ರಂದು ಉಪ ಲೋಕಾಯುಕ್ತರು, ಕರ್ನಾಟಕ ನಾಗರಿಕ ಸೇವಾ (ನಡವಳಿಕೆ) ನಿಯಮಗಳು, 1966 ರ ನಿಯಮ 3 (1) (i), (ii) ಮತ್ತು (iii) ಅಡಿಯಲ್ಲಿ ಅನುಚಿತವಾಗಿ ವರ್ತಿಸಿದ್ದರಿಂದ ಅವರಿಗೆ ಕಡ್ಡಾಯ ನಿವೃತ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಶಿಫಾರಸನ್ನು ಅಂಗೀಕರಿಸಿದ ರಾಜ್ಯ ಸರ್ಕಾರವು ಮಾರ್ಚ್ 10 ರಂದು ಹನುಮಂತಪ್ಪ ಹಂಚಿನಮನೆ ಅವರಿಗೆ ಶೋಕಾಸ್ ನೋಟಿಸ್ ನೀಡಿತು. ಇದಕ್ಕೆ ಉತ್ತರವಾಗಿ, ಅವರು ಆರೋಪಗಳನ್ನು ನಿರಾಕರಿಸಿದರು, ತನಿಖಾಧಿಕಾರಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಹೇಳಿದರು. ವಿಚಾರಣಾ ವರದಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿತು. ಅದಾದ ನಂತರ ಪಿಓಡಿಗೆ ಕಡ್ಡಾಯ ನಿವೃತ್ತಿ ಘೋಷಿಸಿದೆ.

representational image
IPS ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com