ಶಕ್ತಿ ಯೋಜನೆ ಹೊಸ ಮೈಲಿಗಲ್ಲು: 500 ಕೋಟಿ ದಾಟಿದ ಮಹಿಳಾ ಫಲಾನುಭವಿಗಳ ಸಂಖ್ಯೆ

5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು, ಈ ಯೋಜನೆಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು.
CM SIddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 'ಶಕ್ತಿ' ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ್ದು, ಈ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ.

'ಶಕ್ತಿ' ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಈ ಸಂದರ್ಭವನ್ನು ಗುರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಂಕೇತಿಕವಾಗಿ ಮಹಿಳಾ ಪ್ರಯಾಣಿಕರಿಗೆ ನಿರ್ವಾಹಕರಂತೆ ಟಿಕೆಟ್ ನೀಡಲಿದ್ದಾರೆ.

5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು, ಈ ಯೋಜನೆಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು.

ಅಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) - ನಾಲ್ಕು ಬಸ್ ನಿಗಮಗಳಲ್ಲಿ 497.79 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಉಚಿತ ಟಿಕೆಟ್​ ಪಡೆದು ಪ್ರಯಾಣಿಸಿದ ಟಿಕೆಟ್​ಗಳ ಮೌಲ್ಯ ಅಂದಾಜು 12,600 ಕೋಟಿ ರೂಪಾಯಿಗಳಾಗಿದೆ. ಪ್ರತಿ ದಿನ ಅಂದಾಜು 80 ಲಕ್ಷಕ್ಕೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ.

CM SIddaramaiah
ಶಕ್ತಿ ಯೋಜನೆ ಬಳಿಕ ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ: ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com