ಸಿಗಂದೂರು ಸೇತುವೆ ಉದ್ಘಾಟನೆಗೆ ರಾಜಕೀಯ ಬಣ್ಣ: ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಸಿಎಂ; ಅಚ್ಚರಿ ಮೂಡಿಸಿದ ಪತ್ರ

ಸಾಗರ–ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.
CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಸಿಗಂದೂರು ಸೇತುವೆ ಉದ್ಘಾಟನೆಗೂ ಮುನ್ನವೇ ರಾಜಕೀಯ ಕಿತ್ತಾಟ ಶುರುವಾಗಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿರುವ ಅವರು, ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ‌ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ.

ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

CM Siddaramaiah
ಸಿಗಂದೂರು ವಿವಾದ: ಯಾವುದೇ ಕಾರಣಕ್ಕು ದೇವಾಲಯವನ್ನು ಮುಜರಾಯಿ ವ್ಯಾಪ್ತಿಗೆ ತರುವುದಿಲ್ಲ- ಮುಖ್ಯಮಂತ್ರಿ ಭರವಸೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com