
ಬೆಂಗಳೂರು: ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಕನ್ನಡದ ಚಿತ್ರಗಳಿಗೆ ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಆದರೆ ರಾಜ್ಯದಲ್ಲಿ ಪರಭಾಷೆ ಸಿನಿಮಾಗಳು ಮಾತ್ರ ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಹೀಗಾಗಿ ಈಗ ಎಲ್ಲಾ ಭಾಷೆಗಳಿಗೂ ಸೇರಿದಂತೆ ಏಕರೂಪ ದರ ಫಿಕ್ಸ್ ಮಾಡಲಾಗಿದೆ.
Advertisement