ಬೆಂಗಳೂರು ಕಾಲ್ತುಳಿತ: KSCA, RCB, DNA ಜೊತೆಗೆ ಸ್ಥಿತಿಗತಿ ವರದಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಹಿತಾಸಕ್ತಿ ಅಥವಾ ಗೌಪ್ಯತೆ ಹಕ್ಕುಗಳು ಮಾನದಂಡಗಳನ್ನು ಒಳಗೊಂಡಿರುವ ವಿಷಯಗಳಲ್ಲಿ ಮಾತ್ರ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.
High Court
ಹೈಕೋರ್ಟ್
Updated on

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4 ರಂದು ಆರ್ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದ ಸ್ಥಿತಿಗತಿ ವರದಿಯ ಪ್ರತಿಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಗೆ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಹಿತಾಸಕ್ತಿ ಅಥವಾ ಗೌಪ್ಯತೆ ಹಕ್ಕುಗಳು ಮಾನದಂಡಗಳನ್ನು ಒಳಗೊಂಡಿರುವ ವಿಷಯಗಳಲ್ಲಿ ಮಾತ್ರ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಅನುಮತಿಸಿದೆ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವ ರಾಜ್ಯದ ಸಮರ್ಥನೆಯನ್ನು ನ್ಯಾಯಾಲಯ ತಿರಸ್ಕರಿಸಿತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಸೋಮವಾರ ಈ ಕಾಲ್ತುಳಿತದ ಕುರಿತಾದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಭಾಗಿಯಾಗಿರುವ ಕಕ್ಷಿದಾರರಿಗೆ ಸ್ಥಿತಿಗತಿ ವರದಿ ನೀಡಬೇಕೆ ಎಂಬುದರ ಕುರಿತು ಅವಲೋಕನ ನಡೆಸಿತು.

ವರದಿ ಹಂಚಿಕೊಳ್ಳುವುದರಿಂದ ತನಿಖಾ ಆಯೋಗ ಮತ್ತು ಮ್ಯಾಜಿಸ್ಟ್ರೇಟ್ ವಿಚಾರಣೆಯ ಮೇಲೆ ಪ್ರಭಾವ ಬೀರಬಹುದು ಎಂಬ ರಾಜ್ಯ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಆಧಾರರಹಿತ ಮತ್ತು ಸಾರ್ವಜನಿಕ ಹಿತಾಸಕ್ತಿ ಸಮರ್ಥನೆಯ ಕೊರತೆ ಅಂತಾ ಹೇಳಿತು.

ಹೊಣೆಗಾರಿಕೆಯನ್ನು ನಿರ್ಣಯಿಸಲು ಮತ್ತು ಭವಿಷ್ಯದಲ್ಲಿ ಅಂತಹ ಘಟನೆಗಳಾದಂತೆ ತಡೆಯಲು ಸ್ವಯಂಪ್ರೇರಿತ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಸಹಕಾರ ನಿರೀಕ್ಷಿಸುವಾಗ ಪ್ರಮುಖರಾದವರಿಂದ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವುದು ನ್ಯಾಯಯುತವಾದುದಲ್ಲ ಎಂದು ಪೀಠ ಹೇಳಿದೆ.

High Court
ಬೆಂಗಳೂರು ಕಾಲ್ತುಳಿತ: CAT ಆದೇಶ ವಿರುದ್ಧ RCB ಅರ್ಜಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com