ಚಿಕ್ಕಬಳ್ಳಾಪುರ: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ, ಆತ್ಮಹತ್ಯೆಯ ಶಂಕೆ!

ಸುದ್ದಿ ತಿಳಿಯುತ್ತಿದ್ದಂತೆಯೇ ಪಾತಪಾಳ್ಯ ಪೊಲೀಸರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಕೆಯ ಸಾವಿನ ಕಾರಣ ನಿರ್ಧರಿಸಲು ಫೋರೆನ್ಸಿಕ್ ಮತ್ತು ಅಪರಾಧ ತಂಡಗಳು ತನಿಖೆಯಲ್ಲಿ ನೆರವಾಗುತ್ತಿವೆ.
Casual Images
ಸಾಂದರ್ಭಿಕ ಚಿತ್ರ
Updated on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಅಡಿವಿಕೊತ್ತೂರು ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಯುವತಿ ಸುಮಾರು 25 ವರ್ಷ ವಯಸ್ಸಿನವಳಾಗಿದ್ದು, ಮೂರ್ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಪಾತಪಾಳ್ಯ ಪೊಲೀಸರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಕೆಯ ಸಾವಿನ ಕಾರಣ ನಿರ್ಧರಿಸಲು ಫೋರೆನ್ಸಿಕ್ ಮತ್ತು ಅಪರಾಧ ತಂಡಗಳು ತನಿಖೆಯಲ್ಲಿ ನೆರವಾಗುತ್ತಿವೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ, ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡು ಬಂದಿದ್ದು, ಅದಕ್ಕೆ ಪೂರಕವಾದ ಸಾಕ್ಷ್ಯಗಳು ಸಿಕ್ಕಿವೆ. ಪ್ರಿಯಕರನೊಂದಿಗೆ ಜಗಳವಾಡಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಪ್ರಿಯಕರನನ್ನು ಗುರುತಿಸಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

Casual Images
ಬೆಂಗಳೂರು: ಪೋಷಕರಿಗೆ ತಿಳಿಸದೆ ಪ್ರೀತಿಸಿ ವಿವಾಹವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com