ರೌಡಿಶೀಟರ್ ಹತ್ಯೆ ಕೇಸ್: ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ.
Byrathi Basavaraj
ಭೈರತಿ ಬಸವರಾಜ್
Updated on

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.

ನಿನ್ನೆ ಮಂಗಳವಾರ ರಾತ್ರಿ ನಗರದ ಭಾರತಿ ನಗರದಲ್ಲಿ ಹಲ್ಲೆಕೋರರು ಕಾರಿನಲ್ಲಿ ಬಂದು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ. ಮೃತನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಭೈರತಿ ಬಸವರಾಜ್ ಜೊತೆಗೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನಲ್ಲಿ, ಎಂಟರಿಂದ ಒಂಬತ್ತು ಜನರು ತಮ್ಮ ಮಗನ ಮೇಲೆ ಕಬ್ಬಿಣದ ರಾಡ್ ಮತ್ತು ಮಚ್ಚಿನಿಂದ ಹಲ್ಲೆ ನಡೆಸುತ್ತಿರುವುದನ್ನು ನೋಡಿರುವುದಾಗಿ ಹೇಳಿದ್ದಾರೆ. ಸ್ನೇಹಿತ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರನ್ನೂ ಕಬ್ಬಿಣದ ರಾಡ್‌ನಿಂದ ಹೊಡೆದಿದ್ದಾರೆ.

ನಾನು ಕಿರುಚುತ್ತಿದ್ದಂತೆ, ಸುತ್ತಮುತ್ತ ಜನರು ಸೇರಿದರು. ಅಪರಿಚಿತ ವ್ಯಕ್ತಿಗಳು ನನ್ನ ಮಗನನ್ನು ಕೊಂದು ಬಿಳಿ ಸ್ಕಾರ್ಪಿಯೋ ವಾಹನ ಮತ್ತು ದ್ವಿಚಕ್ರ ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳನ್ನು ಗುರುತಿಸಬಲ್ಲೆ" ಎಂದು ವಿಜಯಲಕ್ಷ್ಮಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಡಿಸಿಪಿ ಡಿ ದೇವರಾಜ್ ಮತ್ತು ಜಂಟಿ ಆಯುಕ್ತ ರಮೇಶ್ ಬಾನೋತ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಕುಮಾರ್ ಅವರ ಮೇಲೆ ದೀರ್ಘ ಕ್ರಿಮಿನಲ್ ದಾಖಲೆ ಇದ್ದು, ಆತನ ವಿರುದ್ಧ 11 ಪ್ರಕರಣಗಳು ದಾಖಲಾಗಿವೆ.

2006 ರಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಭೈರತಿ ಬಸವರಾಜ್ ಜೊತೆಗೆ ಜಗದೀಶ್, ಕಿರಣ್, ವಿಮಲ್ ಮತ್ತು ಅನಿಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಸಚಿವರನ್ನು ಎಫ್‌ಐಆರ್‌ನಲ್ಲಿ 5 ನೇ ಆರೋಪಿಯನ್ನಾಗಿ ಸೇರಿಸಲಾಗಿದೆ.

Byrathi Basavaraj
ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನೇಮಕ

ಫೆಬ್ರವರಿ 11 ರಂದು, ಜಗದೀಶ್ ಮತ್ತು ಕಿರಣ್ ಕಿಟಕ್ನೂರಿನಲ್ಲಿರುವ ಶಿವಪ್ರಕಾಶ್ ಆಸ್ತಿಯನ್ನು ಅತಿಕ್ರಮಣ ಮಾಡಿ ಅಲ್ಲಿಂದ ಇಬ್ಬರು ಮಹಿಳಾ ಭದ್ರತಾ ಸಿಬ್ಬಂದಿಯನ್ನು ಹೊರಹಾಕಿದ್ದರು ಎಂದು ಕೂಡ ವಿಜಯಲಕ್ಷ್ಮಿ ಆರೋಪಿಸಿದ್ದಾರೆ.

ಆರೋಪಿಗಳು ಅವರಿಗೆ ಫೋನ್‌ನಲ್ಲಿ ಕರೆ ಮಾಡಿ ತಮ್ಮ ಮಗನಿಗೆ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com