
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್‌ಪಾಟ್ ಹೊಡೆದಿದೆ.
ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.
ಕೆಲವು ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿದ್ದರು. ಕಾರ್ಯಕ್ರಮದ ಮಧ್ಯೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಕ್ಕೆ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಅವರು ಯಾರು ಎಸ್‌ಪಿ ಎಂದು ಕೇಳಿ, ಕೈಎತ್ತಿ ಹೊಡೆಯಲು ಹೋಗಿದ್ದರು.
ಈ ಘಟನೆ ಬಳಿಕ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಮಾತನಾಡಿ ಮನವೊಲಿಸಿದ್ದರು. ನಂತರ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದರು.
Advertisement