
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡರು ಎಂದು ಆರೋಪಿಸಿ ಯುವತಿಯೋರ್ವಳು ಬೀದರ್‌ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಪ್ರತೀಕ್ ಚೌಹಾಣ್ ಮದುವೆಯಾಗೋದಾಗಿ ನಂಬಿಸಿ, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಅಂತ ಆರೋಪಿಸಿದ್ದಾಳೆ. ಈ ಬಗ್ಗೆ ದೂರು ನೀಡಲು ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆ ತೆರಳಿದ್ದಾಗ ಪೊಲೀಸರು ದೂರು ಸ್ವೀಕರಿಸಿಲ್ಲ ಅಂತ ಆರೋಪಿಸಿದ್ದಾಳೆ.
2023ರಲ್ಲಿ ನನ್ನ ಹಾಗೂ ಪ್ರತೀಕ್ ಚೌಹಾಣ್‌ಗೆ ಮನೆಯವರೆಲ್ಲ ಸೇರಿ ನಿಶ್ಚಿತಾರ್ಥ ಆಗಿತ್ತು. ನಂತರ ಹಲವು ಬಾರಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Advertisement