ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ: ಸಂಚಾರ ಬಂದ್

ಭೂಕುಸಿತ ಪರಿಣಾಮ ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್​ಗಳು ಬದಲಿ ಮಾರ್ಗ ಬಳಸಲು ಎಸ್​​ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.
Landslide
ಭೂಕುಸಿತ
Updated on

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ವಾಹನ ಸಂಚಾರ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದ್ದು, ಸ್ಥಳದಲ್ಲಿ ಅಧಿಕಾರಿಗಳು ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಭೂಕುಸಿತ ಪರಿಣಾಮ ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್​ಗಳು ಬದಲಿ ಮಾರ್ಗ ಬಳಸಲು ಎಸ್​​ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ‌.75 ರ ಧರ್ಮಸ್ಥಳ ಕ್ರಾಸ್​​​ನಿಂದ ಸ್ವಲ್ಪ ಮುಂದೆ ಗುಡ್ಡ ಕುಸಿತ ಉಂಟಾಗಿದ್ದು, ಹೀಗಾಗಿ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಾಗಿದೆ.

Landslide
ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು, ಅಮರನಾಥ ಯಾತ್ರೆ ಸ್ಥಗಿತ; Video

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com