Priyank kharge
ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯಲ್ಲಿ ಪ್ರಿಯಾಂಕ್ ಖರ್ಗೆ

ಗ್ರಾಮೀಣ ಇಂಧನ ವ್ಯವಸ್ಥೆಗಳ ಉತ್ತೇಜಿಸಲು ನೂತನ ಜೈವಿಕ ಇಂಧನ ನೀತಿ ಜಾರಿಗೆ ಸರ್ಕಾರ ಮುಂದು..!

ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಹೊಸ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಇದು ಅಂತಿಮ ಹಂತದಲ್ಲಿದೆ.
Published on

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಜೈವಿಕ ಇಂಧನ ನೀತಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಹೊಸ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಇದು ಅಂತಿಮ ಹಂತದಲ್ಲಿದೆ ಎಂದು ಹೇಳಿದರು.

ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ತಿಳಿಸಿದರು.

Priyank kharge
ಕೇಂದ್ರದ ನಿರ್ಧಾರದಿಂದ ತೊಗರಿ ಬೆಳೆಗಾರರಿಗೆ ಸಂಕಷ್ಟ: ಪ್ರಿಯಾಂಕ್ ಖರ್ಗೆ ಆರೋಪ

ಜೈವಿಕ ಇಂಧನ ಸಂಪನ್ಮೂಲಗಳ ಲಭ್ಯತೆ, ಕ್ರೋಢಿಕರಣ ಕುರಿತು ಪರಿಶೀಲನೆ ಮಾಡಲಾಗಿದ್ದು, ನೂತನ ಕರ್ನಾಟಕ ರಾಜ್ಯ ಜೈವಿಕ ಇಂಧನ ರಚನೆ ಕುರಿತು ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ನಿರ್ಮಾಣ ಮಾಡುವ ಕುರಿತು ಸಮ್ಮೇಳನಗಳು, ಕಾರ್ಯಗಾರಗಳು, ವಸ್ತು ಪ್ರದರ್ಶನಗಳು ಹಾಗೂ ಹೂಡಿಕೆದಾರರ ಸಮಾವೇಶಗಳಲ್ಲಿ ಭಾಗವಹಿಸಿ ಮಾಹಿತಿ ಸಂಗ್ರಹಿಸಲಾಗಿದೆ ಹಾಗೂ ಮಂಡಳಿಗೆ ಕೈಗಾರಿಕಾ ಸಂಘಟನೆಗಳು, ಸಂಸ್ಥೆಗಳು, ವಿದೇಶದ ವಿಶ್ವವಿದ್ಯಾಲಯಗಳು ಮುಂತಾದ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿನ ಜೈವಿಕ ಇಂಧನ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಬಯೋಚಾರ್, ಬಯೋಕೋಲ್. ಬಯೋಡೀಸೆಲ್, 2ಜಿ ಎಥನಾಲ್, ಗ್ರೀನ್ ಹೈಡ್ರೋಜನ್ ಕಾರ್ಯ ಯೋಜನೆಗಳಲ್ಲಿ ನಿರತರಾಗಿರುವ ಉದ್ದಿಮೆದಾರರುಗಳ ವಿಚಾರ ವಿನಿಮಯ ಸಭೆಯನ್ನು ತುಮಕೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಮಾಹಿತಿ ಮಾಹಿತಿ ಸಂಗ್ರಹಿಸಲಾಗಿದೆ, ಶೀಘ್ರದಲ್ಲೇ ನೀತಿಯ ಕರಡು ಸಿದ್ಧಪಡಿಸಿ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com