
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಘೋಷಣೆ ಮಾಡಿದ್ದ ಉಚಿತ ವಿದ್ಯುತ್ ಯೋಜನೆಗೆ ಶುಕ್ರವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಆಗಸ್ಟ್ 1 ರಿಂದ ರಾಜ್ಯಾದ್ಯಂತ ಗೃಹಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಪ್ರಸ್ತಾವನೆಗೆ ಇಂದು ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಇಲಾಖೆಯ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.
"ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬಿಹಾರ ರಾಜ್ಯ ವಿದ್ಯುತ್ ಹೋಲ್ಡಿಂಗ್ ಕಾರ್ಪೊರೇಷನ್ ಲಿಮಿಟೆಡ್‌ಗೆ ವಿದ್ಯುತ್ ಬಳಕೆಗಾಗಿ ಹೆಚ್ಚುವರಿಯಾಗಿ 3,797 ಕೋಟಿ ರೂ.ಗಳನ್ನು ಪಾವತಿಸಲಿದೆ" ಎಂದು ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಐಪಿಆರ್‌ಡಿ) ಪ್ರಕಟಣೆಯಲ್ಲಿ ತಿಳಿಸಿದೆ.
ಈ ನಿರ್ಧಾರದಿಂದ ರಾಜ್ಯದ ಒಟ್ಟು 1.67 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
Advertisement