ಮುಷ್ಕರಕ್ಕೆ ಮುಂದಾಗಿದ್ದ ​ಸಾರಿಗೆ ನೌಕರರಿಗೆ ಸರ್ಕಾರ ಶಾಕ್​: ESMA ಜಾರಿ, ಪ್ರತಿಭಟನೆಗೆ 6 ತಿಂಗಳ ನಿಷೇಧ

ಕೆಎಸ್ಆರ್​​ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದ್ದು, ಮುಂದಿನ ಆರು ತಿಂಗಳು ಎಸ್ಮಾ ಜಾರಿಯಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ.
Vidhanasoudha- CM Siddaramaiah
ವಿಧಾನಸೌಧ-ಸಿಎಂ ಸಿದ್ದರಾಮಯ್ಯonline desk
Updated on

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮೂಲಕ ರಾಜ್ಯ ಸರ್ಕಾರ ಶಾಕ್ ನೀಡಿದೆ.

ಕೆಎಸ್ಆರ್​​ಟಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಲಾಗಿದ್ದು, ಮುಂದಿನ ಆರು ತಿಂಗಳು ಎಸ್ಮಾ ಜಾರಿಯಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಮುಷ್ಕರವನ್ನು ನಿಷೇಧಿಸಲಾಗಿದೆ.

ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದರಂತೆ ರಾಜ್ಯದ ಕೆಎಸ್​ಆರ್​ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು.

ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್​​ ನೇತೃತ್ವದಲ್ಲಿ ಮುಷ್ಕರ ನಡೆಸಲು ಮುಂದಾಗದಲಾಗಿತ್ತು.

ಈ ಬಗ್ಗೆ ಸುಬ್ಬರಾವ್ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಇ-ಮೇಲ್​ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದರು.

Vidhanasoudha- CM Siddaramaiah
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ: ಸಾರಿಗೆ ನಿಗಮಗಳ ನೌಕರರಿಂದ ಆಗಸ್ಟ್ 5ಕ್ಕೆ ಮುಷ್ಕರ

ಎಸ್ಮಾ ಎಂದರೆ, ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ(Essential Services Maintenance Act) ಸರ್ಕಾರಿ ನೌಕರನನ್ನು ನಿಯಂತ್ರಣ ಮಾಡುವ ಕಾಯ್ದೆ 1968 ರಿಂದ ಜಾಲ್ತಿಯಲ್ಲಿದ್ದು, ಕರ್ನಾಟಕದಲ್ಲಿ ಎಸ್ಮಾ ಕುರಿತು 1994ರಲ್ಲಿ ಕಾನೂನಿನ ಮೊದಲ ರೂಪುರೇಷೆ ತಯಾರಾಯಿತು. 2013ರ ಜೂನ್ ನಿಂದ ರಾಜ್ಯದಲ್ಲಿ ಕಾನೂನಾಗಿ ಮಾರ್ಪಾಡಾಯಿತು. ನಂತರ 2015 ರಲ್ಲಿ ಸರ್ಕಾರ ಕೆಲ ತಿದ್ದುಪಡಿ ಮಾಡಿದೆ.

ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆ ನಡೆಸಿ ಪರಿಸ್ಥಿತಿ ನಿಯಂತ್ರಣ ತಪ್ಪುತ್ತದೆ ಎನ್ನುವುದು ಸರ್ಕಾರದ ಗಮನಕ್ಕೆ ಬಂದರೆ ಎಸ್ಮಾ ಜಾರಿ ಮಾಡಲು ಮುಂದಾಗುತ್ತದೆ. ಮೂಲ ಸೌಕರ್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಮುಖಭಂಗ ಬರುವ ಹಂತಕ್ಕೆ ಪ್ರತಿಭಟನೆಗಳು ಬಂದಾಗ ಸರ್ಕಾರ ಎಸ್ಮಾ ಜಾರಿ ಮಾಡುವ ಅಧಿಕಾರವಿದೆ.

ಎಸ್ಮಾ ಎಂದರೆ ಕಡ್ಡಾಯ ಕೆಲಸ. ಸಂವಿಧಾನದಲ್ಲಿ ತಿಳಿಸಿರುವಂತೆ, 7ರಲ್ಲಿನ 2ನೇ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ 6 ತಿಂಗಳು ಜೈಲು ವಾಸ ಶಿಕ್ಷೆಯನ್ನು ನೀಡುವ ಸಾಧ್ಯತೆಯೂ ಇರುತ್ತದೆ ಎಂಬ ಉಲ್ಲೇಖವಿದೆ.

ಎಸ್ಮಾ ಜಾರಿಯಲ್ಲಿದ್ದ ಮೇಲೆ ಅದನ್ನು ಧಿಕ್ಕರಿಸಿ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಈ ಕಾರಣಕ್ಕೆ ರಾಜ್ಯ ಸರ್ಕಾರಗಳು ಉದ್ಯೋಗಿಗಳು ಹಠ ಮುಂದುವರಿಸಿದರೆ ಕೊನೆಯ ಅಸ್ತ್ರವಾಗಿ ಎಸ್ಮಾ ಜಾರಿಗೊಳಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com