
ಚಿಕ್ಕಮಗಳೂರು: ಪ್ರವಾಸಿ ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಶನಿವಾರ ನಡೆದಿದೆ.
ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ವಾರಾಂತ್ಯ ಹಿನ್ನೆಲೆ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು.
ರಸ್ತೆ ತಿರುವಿನ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು, ಪಲ್ಟಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಪೊಲೀಸರು ಪರೀಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement