Karnataka High Court ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಜೆಗೆ ಪ್ರಮಾಣ ವಚನ ಬೋಧಿಸಿದರು.
Justice Vibhu Bakhru sworn in as Chief Justice of Karnataka High Court
ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
Updated on

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಜೆಗೆ ಪ್ರಮಾಣ ವಚನ ಬೋಧಿಸಿದರು.

ಇದಕ್ಕೂ ಮೊದಲು, 59 ವರ್ಷದ ನ್ಯಾಯಮೂರ್ತಿ ಬಖ್ರು ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅವರನ್ನು ಬಡ್ತಿ ನೀಡಲಾಗಿದ್ದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಮಾಡಿದ ಶಿಫಾರಸುಗಳನ್ನು ಆಧರಿಸಿದೆ.

Justice Vibhu Bakhru sworn in as Chief Justice of Karnataka High Court
Karnataka Rains: ಮಡಿಕೇರಿಯಲ್ಲಿ ಭಾರಿ ಮಳೆ, ಕೊಡಗಿನಲ್ಲಿ Red Alert; ಶಾಲಾ-ಕಾಲೇಜುಗಳಿಗೆ ರಜೆ! Bengaluru ಪರಿಸ್ಥಿತಿ ಏನು?

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶರಾದ ವಿ.ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್ (ಬೈರತಿ), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನಪರಿಷತ್ ಸದಸ್ಯರಾದ ನಾಗರಾಜ ಯಾದವ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಬಿ.ಬಿ.ಕಾವೇರಿ, ಸೇರಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com