File photo
ಸಂಗ್ರಹ ಚಿತ್ರ

GST ನೋಟಿಸ್: ಸಹಾಯ ಮಾಡುವ ನೆಪದಲ್ಲಿ ಅಧಿಕಾರಿಗಳು-ಮಧ್ಯವರ್ತಿಗಳಿಂದ ಲಂಚಕ್ಕೆ ಬೇಡಿಕೆ; ಸಹಾಯವಾಣಿ ಆರಂಭ

ವ್ಯಾಪಾರಸ್ಥರಿಗೆ ನೋಟಿಸ್ ಕೊಟ್ಟ ಅಧಿಕಾರಿಗಳು 10,000 ಕೊಟ್ಟರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡುತ್ತೇನೆಂದು ಲಂಚಕ್ಕೆ ಬೇಡಿಕೆ ಇಟುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Published on

ಬೆಂಗಳೂರು: ಯುಪಿಐ ಬಳಕೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಜಾರಿಯಾಗಿರುವುದು ಸಣ್ಣ ವ್ಯಾಪಾರಸ್ತರಿಗೆ ಶಾಕ್‌ ಉಂಟು ಮಾಡಿದ್ದೂ, ಇದರ ಬೆನ್ನಲ್ಲೇ ಅನೇಕ ವ್ಯಾಪಾರಸ್ಥರು ಯುಪಿಐ ಬಳಕೆಯನ್ನೇ ನಿಲ್ಲಿಸಿದ್ದಾರೆ.

ಈ ನಡುವೆ ವ್ಯಾಪಾರಸ್ಥರಿಗೆ ನೋಟಿಸ್ ಕೊಟ್ಟ ಅಧಿಕಾರಿಗಳು 10,000 ಕೊಟ್ಟರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡುತ್ತೇನೆಂದು ಲಂಚಕ್ಕೆ ಬೇಡಿಕೆ ಇಟುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ವೈರಲ್ ಆಗಿರುವಂತ ವೀಡಿಯೋಗಳಲ್ಲಿ 10,000 ಕೊಟ್ಟರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡುತ್ತೇನೆಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿರುವುದು ಕಂಡು ಬಂದಿದೆ. ಈ ಕುರಿತು ಮಾಧ್ಯಮಗಳ ವರದಿಗಳಲ್ಲಿ ವರದಿಗಳು ಕಂಡು ಬಂದಿದ್ದು, ಈ ಬೆಳವಣಿಗೆಯನ್ನು ವಾಣಿಜ್ಯ ತೆರಿಗೆ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಇದರಂತೆ ಅಧಿಕಾರಿಗಳು ಹಾಗೂ ಮಧ್ಯವರ್ತಕರಿಗೆ ಶಾಕ್ ನೀಡಿರುವ ಇಲಾಖೆಯು ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.

File photo
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು?

ಈ ಕುರಿತು ಪತ್ರಿಕಾ ಪ್ರಕಟಣೆ ಮಾಡಿದ ಇಲಾಖೆ, ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿ/ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ ಎಂದು ಹೇಳಿದೆ.

ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು ಸಹಾಯವಾಣಿ ಸಂಖ್ಯೆ- 1800 425 6300 (ಸಮಯ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com