
ದಾವಣಗೆರೆ: 3 ದಶಕಗಳ ನಂತರ ವೀರಶೈವ-ಲಿಂಗಾಯತರು ಮತ್ತೆ ಒಗ್ಗೂಡಿದ್ದು, ದಾವಣಗೆರೆಯಲ್ಲಿ ನಡೆಯಲಿರುವ ವೀರಶೈವ ಪೀಠಾಚಾರ್ಯರ ಶೃಂಗಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಪಂಚ ಪೀಠಾಚಾರ್ಯರರು ಒಟ್ಟಿಗೆ ಸೇರುತ್ತಿದ್ದಾರೆ.
ಜು.21 ಹಾಗೂ 22 ರಂದು ವೀರಶೈವ ಪೀಠಾಚಾರ್ಯರ ಶೃಂಗಸಭೆ ದಾವಣಗೆರೆಯಲ್ಲಿ ನಡೆಯುತ್ತಿದ್ದು, ಈ ಶೃಂಗಸಭೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಐದು ಮಠಾಧೀಶರು ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.
ಬಾಳೆಹೊನ್ನೂರು, ಕೇದಾರ, ಉಜ್ಜಯಿನಿ, ರಂಭಾಪುರಿ ಮತ್ತು ಶ್ರೀಶೈಲ ಪೀಠಗಳ ಮುಖ್ಯಸ್ಥರು ಸಮಾವೇಶದಲ್ಲಿ ಒಗ್ಗೂಡಲಿದ್ದಾರೆ.
ಜಾತಿ ಜನಗಣತಿಯ ಸಮಯದಲ್ಲಿ ಸಮುದಾಯವು ಪ್ರಾರಂಭಿಸಬೇಕಾದ ಕ್ರಮ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಬಾಳೆಹೊನ್ನೂರು ಪೀಠದ ಮುಖ್ಯಸ್ಥ ಡಾ. ವೀರಸೋಮೇಶ್ವರ ಜಗದ್ಗುರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಾಗುವುದು. ಕೇಂದ್ರ ಸಚಿವರಾದ ವಿ.ಸೋಮಣ್ಣ, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷರು ಮತ್ತು ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಅಥಣಿ ವೀರಣ್ಣ ಅವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಸಮಾವೇಶವು ಜಾತಿ ಜನಗಣತಿಯ ಕುರಿತು ನಿರ್ಣಯವನ್ನು ಅಂಗೀಕರಿಸುವ ನಿರೀಕ್ಷೆಯಿದೆ. ವೀರಶೈವ-ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಈ ಸಮಾವೇಶ ಶುಭ ಸೂಚನೆಯಾಗಿದೆ ಎಂದು ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಮತ್ತು ರಾಜ್ಯದ ಇತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ಮಂಗಳವಾರ ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ವೀರಸೋಮೇಶ್ವರ ಜಗದ್ಗುರು ಅವರು ಮಾಹಿತಿ ನೀಡಿದ್ದಾರೆ.
Advertisement