ಆರೋಪಿ ಬಚಾವ್ ಮಾಡಲು ಲಂಚ: ಗೋವಿಂದಪುರ ಮಹಿಳಾ PSI ಲೋಕಾಯುಕ್ತ ಬಲೆಗೆ!

ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆದ ಆರೋಪದ ಮೇರೆಗೆ ಬಂಧಿಸಿದ್ದಾರೆ.
Govindapura police station
ಗೋವಿಂದ ಪುರ ಪೊಲೀಸ್ ಠಾಣೆ
Updated on

ಬೆಂಗಳೂರು: ಪ್ರಕರಣವೊಂದರ ಆರೋಪಿಯನ್ನು ಬಚಾವ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಗೋವಿಂದ ಪುರ ಮಹಿಳಾ ಪಿಎಎಸ್ ಅನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಹೌದು.. ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆದ ಆರೋಪದ ಮೇರೆಗೆ ಬಂಧಿಸಿದ್ದಾರೆ.

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಲು ವ್ಯಕ್ತಿಯೊಬ್ಬರಿಂದ 1.25 ಲಕ್ಷ ರು. ಲಂಚ ಸ್ವೀಕರಿಸುವಾಗ ಮಹಿಳಾ ಪಿಎಸ್‌ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಎಚ್‌ಬಿಆರ್ ಲೇಔಟ್ ನಿವಾಸಿ ಮೊಹಮ್ಮದ್ ಯೂನಸ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಸೋಮವಾರ ಲಂಚ ಸ್ವೀಕರಿಸುವಾಗ ಪಿಎಸ್‌ಐಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Govindapura police station
'ಜಗತ್ತಿನಲ್ಲೇ ಅತೀ ದುರಾಸೆಯ ಮಾಲೀಕ': 23 ಲಕ್ಷ ರೂ ಅಡ್ವಾನ್ಸ್, 2.3 ಲಕ್ಷ ರೂ ತಿಂಗಳ ಬಾಡಿಗೆ; ಬೆಂಗಳೂರು ಮನೆ ಮಾಲೀಕನ ವಿರುದ್ಧ Canada ಪ್ರಜೆ ಆಕ್ರೋಶ

ಏನಿದು ಪ್ರಕರಣ?

ಪೊಲೀಸ್ ಮೂಲಗಳ ಪ್ರಕಾರ ದೂರುದಾರ ಮೊಹಮ್ಮದ್ ಯೂನಸ್ ಯುವತಿಯೊಬ್ಬಳನ್ನು ಪ್ರೀತಿಸಿದ್ದು, ಇಬ್ಬರು 4 ವರ್ಷದಿಂದ ಒಂದೇಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು. ಕೆಲ ದಿನಗಳ ಬಳಿಕ ಮೊಹಮ್ಮದ್‌ಗೆ ಬೇರೊಂದು ಯುವತಿ ಜತೆಗೆ ಈ ಮೊದಲೇ ಮದುವೆಯಾಗಿರುವ ವಿಚಾರ ಯುವತಿಗೆ ಗೊತ್ತಾಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಗಲಾಟೆ ಮಾಡಿ ಯುವತಿಗೆ ಹಲ್ಲೆ ಮಾಡಿದ್ದ. ಈ ಸಂಬಂಧ ಯುವತಿ ಮೊಹಮ್ಮದ್ ಯೂನಸ್ ವಿರುದ್ಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ

ಈ ನಡುವೆ ಮೇ 5ರಂದು ಮೊಹಮ್ಮದ್, ಯುವತಿಗೆ ಕರೆ ಮಾಡಿ ಮಾತನಾಡುವುದಿದೆ ಬಾ ಎಂದು ಎಚ್ ಬಿಆ‌‌ರ್ ಲೇಔಟ್‌ನ ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆ ತನ್ನ ವಿರುದ್ಧ ಕೆ.ಜಿ.ಹಳ್ಳಿ ಠಾಣೆಗೆ ನೀಡಿರುವ ದೂರನ್ನು ಹಿಂಪಡೆಯುವಂತೆ ಹೇಳಿದ್ದಾನೆ. ಇದಕ್ಕೆ ಆ ಯುವತಿ ನಿರಾಕರಿಸಿದಾಗ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದ. ಬಳಿಕ ಆತನೇ ಸ್ಥಳೀಯ ಸಹಾಯದಿಂದ ಯುವತಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು ಅಪಘಾತವಾಗಿದೆ ಎಂದು ಸುಳ್ಳು ಹೇಳಿ ಚಿಕಿತ್ಸೆ ಕೊಡಿಸಿದ್ದ. ಚೇತರಿಸಿಕೊಂಡ ಬಳಿಕ ಆ ಯುವತಿ

ಗೋವಿಂದಪುರ ಪೊಲೀಸ್ ಠಾಣೆಗೆ ಮೊಹಮ್ಮದ್ ಯೂನಿಸ್ ವಿರುದ್ಧ ದೂರು ನೀಡಿದ್ದಳು.

Govindapura police station
Biklu Shiva Murder Case: ಪ್ರಮುಖ ಆರೋಪಿ ಜಗದೀಶ್ ಜೊತೆ ನಟಿ ರಚಿತಾರಾಮ್, ನಟ ರವಿಚಂದ್ರನ್ ಫೋಟೋ viral!

ಬಿ ರಿಪೋರ್ಟ್ ಸಲ್ಲಿಸಲು ಲಂಚ

ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಯೂನಸ್ ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಲು ಮಹಿಳಾ ಪಿಎಸ್‌ಐ ಸಾವಿತ್ರಿ ಬಾಯಿ 1.25 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿದ್ದರು. ಆದರೆ ಮಹಮದ್ ಲಂಚದ ಹಣವನ್ನು ಪಾವತಿಸಲು ಸಾಧ್ಯವಾಗದೆ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದ.

ಬಳಿಕ ಆತನ ಮೂಲಕವೇ ಲೋಕಾಯುಕ್ತ ಪೊಲೀಸರು ಲಂಚ ಪ್ರಕರಣ ಬೇದಿಸಲು ಜಾಲ ಬೀಸಿದ್ದರು. ಅದರಂತೆ ಪೊಲೀಸರು ಸೋಮವಾರ ಲಂಚ ಪಡೆಯುತ್ತಿದ್ದಾಗ ಬಲೆ ಬೀಸಿ ಆರೋಪಿ ಮಹಿಳಾ ಅಧಿಕಾರಿಯನ್ನು ಬಂಧಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com