
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವೀಸಾ ಅವಧಿ ಮುಗಿದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 9 ವಿದೇಶಿಗರನ್ನು ಬಂಧಿಸಿದ್ದಾರೆ.
ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಾಸ್ ಪೋರ್ಟ್, ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸಗಿದ್ದರು. ಇನ್ನು ಬಂಧಿತರನ್ನು ಡಿಟೆನ್ಷನ್ ಸೆಂಟರ್ ಗೆ ಕಳುಹಿಸಲಾಗಿದ್ದು, ಬಂಧಿತರನ್ನು ಅವರವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆದಿದೆ.
ವಿದ್ಯಾಭ್ಯಾಸ ಹಾಗೂ ಇನ್ನಿತರ ಉದ್ದೇಶಕ್ಕಾಗಿ ಬೆಂಗಳೂರಿಗೆ ಬಂದು ವೀಸಾ ಅವಧಿ ಮುಗಿದರೂ ಇಲ್ಲೇ ನೆಲೆಸುತ್ತಿರುವ ವಿದೇಶಿಗರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವುದು ನಗರ ಪೊಲೀಸರಿಗೆ ಸವಾಲಿನ ಕೆಲಸವಾಗಿದೆ. ಹೀಗಿದ್ದರೂ ಸಹ ಪೊಲೀಸರು ಆಗಾಗ ವಿದೇಶಿಗರ ಪತ್ತೆ ಕಾರ್ಯಚರಣೆ ನಡೆಸುತ್ತಲೇ ಇದ್ದಾರೆ.
Advertisement