ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ: ಮೂವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

ಈ ಮೂವರ ವಿರುದ್ಧ ಗಲಭೆ ನಡೆಸಿ ಬಳಿಕ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪವಿತ್ತು.
DJ Halli, KG Halli clash
ಡಿಜೆ ಹಳ್ಳಿ ಹಿಂಸಾಚಾರ
Updated on

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2020ರ ಆ.11 ರಂದು ರಾತ್ರಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಎನ್​ಐಎ ಕೋರ್ಟ್ ಬುಧವಾರ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಎನ್ಐಎ ವಿಶೇಷ ಕೋರ್ಟ್, ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್​ ಗೆ 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 46 ಸಾವಿರ ರೂಪಾಯಿ ದಂಡ ವಿಧಿಸಿ ಇಂದು ತೀರ್ಪು ನೀಡಿದೆ.

ಈ ಮೂವರ ವಿರುದ್ಧ ಗಲಭೆ ನಡೆಸಿ ಬಳಿಕ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪವಿತ್ತು. ಈ ಸಂಬಂಧ ಯುಎಪಿಎ ಕಾಯ್ದೆ ಅಡಿ ಅವರನ್ನು ಬಂಧಿಸಲಾಗಿತ್ತು. ಎನ್‌ಐಎ ಪರ ಎಸ್‌ಪಿಪಿ ಪಿ.ಪ್ರಸನ್ನಕುಮಾರ್ ವಾದಿಸಿದ್ದರು.

DJ Halli, KG Halli clash
ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ಹತ್ಯೆ: 3 SDPI ಕಾರ್ಯಕರ್ತರ ಬಂಧನ

ಏನಿದು ಪ್ರಕರಣ?

ಪ್ರವಾದಿ ಮಹಮ್ಮದ್ ಪೈಗಂಬರ್‌ ಅವರನ್ನು ನಿಂದನೆ ಮಾಡಲಾಗಿದೆ ಎಂದು ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಸಾಮಾಜಿಕ ಜಾಲಾತಾಣ ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದಿಂದ ಎರಡು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವಾಗಿತ್ತು.

ಅಂದಿನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಪೋಸ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ಅವರ ಮನೆಗೆ ಬೆಂಕಿ ಹಚ್ಚಿದ್ದಲ್ಲದೇ ಮನೆಯಲ್ಲಿದ್ದ ಎಲ್ಲ ವಸ್ತುಗಳನ್ನು ನಾಶ ಪಡಿಸಿದ್ದರು. ಈ ಸಂದರ್ಭದಲ್ಲಿ ಗಲಭೆ ನಿಯಂತ್ರಣ ಮಾಡಲು ಪೊಲೀಸರು ಗೊಲಿಬಾರ್ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com