ಬೆಂಗಳೂರು: ಕಲಾಸಿಪಾಳ್ಯ BMTC ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಪತ್ತೆ; ಆತಂಕ ಸೃಷ್ಟಿ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು!

ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
Gelatin sticks, detonators found
ಸ್ಫೋಟಕ ವಸ್ತು
Updated on

ಬೆಂಗಳೂರು: ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ಬ್ಯಾಗ್ ನಲ್ಲಿ 6 ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣಕ್ಕೆ ಜಿಲೆಟಿನ್ ಕಡ್ಡಿ ತಂದಿಟ್ಟಿದ್ದು ಯಾರು? ಯಾವ ಉದ್ದೇಶಕ್ಕಾಗಿ ಇದನ್ನು ತರಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇನ್ನೂ ಎಫ್‌ಐಆರ್ ದಾಖಲಿಸಲಾಗಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್ ಗಿರೀಶ್ ತಿಳಿಸಿದ್ದಾರೆ.

Gelatin sticks, detonators found
ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಮೂವರ ದುರ್ಮರಣ; ಹೊಟ್ಟೆಪಾಡಿಗೆ ಹೋಗಿ ಜೀವ ಕಳೆದುಕೊಂಡ ಕಾರ್ಮಿಕರು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com