ಸಣ್ಣ ವ್ಯಾಪಾರಿಗಳಿಗೆ GST ನೋಟಿಸ್: ನಮ್ಮ ಪಾತ್ರವಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ SGST ಎರಡು ಭಾಗಗಳಿದೆ.
File photo
ಸಂಗ್ರಹ ಚಿತ್ರ
Updated on

ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್'ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಿ ಎಸ್ ಟಿ‌ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ‌ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ‌ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ.

File photo
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು?

ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ‌, ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ.

ಯುಪಿಐ ಟ್ರಾನ್ಸಾಕ್ಷನ್ ಇದೀಗ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com