
ಬೆಂಗಳೂರು: ಯುಪಿಐ ಮೂಲಕ ಮಿತಿಗಿಂತ ಹೆಚ್ಚಿನ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಆಗ್ರಹಿಸಿ ವ್ಯಾಪಾರಿಗಳು ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ ಮಾಡಿದ್ದಾರೆ.
ಚಿಕ್ಕ ಪುಟ್ಟ ಅಂಗಡಿಗಳಿಗೆ ರಾಜ್ಯ ತೆರಿಗೆ ಇಲಾಖೆ ತೆರಿಗೆ ಕಟ್ಟುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಬಂದ್ ನಡೆಯುತ್ತಿದೆ. ಕಾಂಡಿಮೆಂಟ್ಸ್ ಹಾಗೂ ಬೇಕರಿ ಮಾಲೀಕರು ಗುರುವಾರ (ಜುಲೈ 24) ಪ್ರತಿಭಟನೆ ನಡೆಸಲಿದ್ದಾರೆ. ಜುಲೈ 25ರಂದು ಕರ್ನಾಟಕ ಕಾರ್ಮಿಕ ಪರಿಷತ್ ಬಂದ್‌ಗೆ ಕರೆಕೊಟ್ಟಿದೆ. ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಯಲಿದ್ದು, ಸುಮಾರು 10 ಸಾವಿರ ಅಂಗಡಿಗಳ ಮಾಲೀಕರು ಭಾಗಿಯಾಗುವ ನಿರೀಕ್ಷೆ ಇದೆ.
ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್ ವಿರುದ್ಧ ವರ್ತಕರು ಸಮರ ಸಾರಿದ್ದಾರೆ. ಇಂದಿನಿಂದ ಹಾಲು, ಹಾಲಿನ ಉತ್ಪನ್ನ ಮಾರಾಟ ಬಂದ್ ಮಾಡಲಾಗುತ್ತದೆ. ಹಾಲು ಬಳಸದೆ ಟೀ-ಕಾಫಿ ಮಾಡುವ ಮೂಲಕ ಆಕ್ರೋಶ ಹೊರಹಾಕಲಿದ್ದಾರೆ. ಪ್ರತಿಭಟನಾರ್ಥವಾಗಿ ಕಪ್ಪು ಪಟ್ಟಿ ಧರಿಸಿ ಇತರೆ ವಸ್ತುಗಳ ಮಾರಾಟ ಮಾಡಲಾಗುತ್ತದೆ.
ಮತ್ತೊಂದೆಡೆ ವಾಣಿಜ್ಯ ತೆರಿಗೆ ಇಲಾಖೆ ವಿರುದ್ದ ಕರ್ನಾಟಕ ರಾಜ್ಯ ಬೇಕರಿ ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರ ಒಕ್ಕೂಟ ಕೂಡ ಸಿಡಿದೆದ್ದಿದೆ. ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ಸದಸ್ಯರು, ಡಿಜಿಟಲ್ ಇಂಡಿಯಾಗೆ ಇಡೀ ದೇಶವೇ ಬೆರಗಾಗಿತ್ತು. ಆದರೆ ಈಗ ಬರುತ್ತಿರುವ ನೊಟೀಸ್ ಎಲ್ಲರಿಗೂ ನಿದ್ದೆಗೆಡಿಸಿದೆ. ಡಿಜಿಟಲ್ ಇಂಡಿಯಾಗೆ ಬೆಂಬಲವಾಗಿ ಎಲ್ಲಾ ಸಣ್ಣಪುಟ್ಟ ಬೇಕರಿ ಮತ್ತು ಕಾಂಡಿಮೆಂಟ್ಸ್ ವ್ಯಾಪಾರಿಗಳು ಇದ್ದರ. ನಾವು ಡಿಜಿಟಲ್ ಇಂಡಿಯಾ ವಿರುದ್ಧ ಇಲ್ಲ. ಆದರೆ ನಮ್ಮ ವ್ಯಾಪಾರಿಗಳಿಗೆ ಈ ಟ್ಯಾಕ್ಸ್ ರೂಲ್ ವಿಚಾರ ಗೊತ್ತಾಗ್ತಿಲ್ಲ ಎಂದಿದ್ದಾರೆ.
ಸಣ್ಣಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ಪಾವತಿಯ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಕಳೆದ ನಾಲ್ಕು ವರ್ಷಗಳ ತೆರಿಗೆ ಪಾವತಿ ಮಾಡಬೇಕೆಂದು ಲಕ್ಷ, ಕೋಟಿ ರೂಪಾಯಿ ಲೆಕ್ಕದಲ್ಲಿ ಕಳೆದ ಹದಿನೈದು ದಿನಗಳಿಂದ ಒಂದೇ ಬಾರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡುತ್ತಿದೆ.
Advertisement