
ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಕಾರ್ಮಿಕರಾದ 30 ವರ್ಷದ ನಜೀರ್, 30 ವರ್ಷದ ಫಾರೂಕ್ ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿ ನಿವಾಸಿ 35 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ಗೆ ಸೇರಿದ ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೇ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement