
ಬೆಂಗಳೂರು: ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಗೋವಿಂದಪುರ ಪೊಲೀಸರು ಗುರುವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ಮಾರುಫ್ ಷರೀಫ್ ಎಂದು ಗುರುತಿಸಲಾಗಿದೆ. ಮಹಿಳೆ ಪಡಿತರ ಖರೀದಿಸಲು ಹೊರಗೆ ಹೋದಾಗ ಆಕೆಯನ್ನು ಹಿಂಬಾಲಿಸಿದ ಆರೋಪಿ, ಸಾರ್ವಜನಿಕವಾಗಿ ಆಕೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.
ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Advertisement