
ಮಂಡ್ಯ: ಮಂಡ್ಯದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರದಲ್ಲಿ ವ್ಯತ್ಯಾಸ ಉಂಟಾಗಿ ಹೊಟ್ಟೆ ನೋವು ಹಾಗೂ ಇನ್ನಿತರ ಅನಾರೋಗ್ಯ ಲಕ್ಷಣಗಳು ಕಂಡುಬಂದಿದ್ದು 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ (Food Poison) ನಿಂದಾಗಿ ಆರೋಗ್ಯ ಹದಗೆಟ್ಟಿದೆ ಎಂದು ಶಂಕಿಸಲಾಗಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ. ದೊಡ್ಡಿಯಲ್ಲಿ ಈ ಘಟನೆ ನಡೆದಿದೆ.
ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.
"ಈವರೆಗೆ, ಈ ವಿಷಯದಲ್ಲಿ ನಮಗೆ ಯಾವುದೇ ದೂರು ಬಂದಿಲ್ಲ. ಸಮಸ್ಯೆಯ ಗಂಭೀರತೆಯನ್ನು ಗಮನಿಸಿದರೆ, ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ನಾವು ನಿರ್ಧರಿಸುತ್ತೇವೆ" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ರಾತ್ರಿ, ರಾಯಚೂರು ಜಿಲ್ಲೆಯಲ್ಲಿ ಶಂಕಿತ ಆಹಾರ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದರು ಮತ್ತು ಇನ್ನಿಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement