ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಗ ಕಣ್ಮರೆ; ದುಃಖ ತಡೆಯಲಾಗದೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ!

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದಿತ್ತು.
Ravikala, son Shamanth
ಸಾವನ್ನಪ್ಪಿದ ತಾಯಿ -ಮಗ
Updated on

ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ. ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ.

ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು. ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು.

ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ 10.30ರ ವೇಳೆಗೆ ಮನೆಯ ಸಮೀಪದ ಕೆರೆಗೆ ರತ್ನಕಲಾ ಹಾರಿದ್ದಾರೆ. ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗನ ಸಾವಿನಿಂದ ಗಣಪತಿಕಟ್ಟೆ ಪ್ರದೇಶದಲ್ಲಿ ದುಃಖ ಆವರಿಸಿದೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ravikala, son Shamanth
'ಮಾವ ತಬ್ಬಿಕೊಂಡರು': ಬೆಂಕಿ ಹಚ್ಚಿಕೊಂಡು ಸೊಸೆ ಆತ್ಮಹತ್ಯೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com