
ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಶಾಪಿಂಗ್ ಮಾಡುತ್ತಿದ್ದ ಯುವತಿಯ ಎಳೆದು ಚುಂಬಿಸಿದ ಯುವಕ; ಬಂಧನ
ನಾಗವಾರದ ಮಾರುಕಟ್ಟೆ ಪ್ರದೇಶದಲ್ಲಿ ಶಾಪಿಂಗ್ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜುಲೈ 11 ರಂದು ಸಂಜೆ 7.45 ರಿಂದ 8 ಗಂಟೆಯ ನಡುವೆ ಘಟನೆ ನಡೆದಿದೆ. ವಿದ್ಯಾರ್ಥಿನಿ ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುತ್ತಿದ್ದಾಗ ಯುವಕ ಎಳೆದು ಅಪ್ಪಿಕೊಂಡಿದ್ದು, ಲೈಂಗಿಕ ಕಿರುಕುಳ ನೀಡಿದ್ದಾನೆಂದು ತಿಳಿದುಬಂದಿದೆ.
ಈ ಸಂಬಂಧ ಯುವತಿಯ ತಾಯಿ ಮರುದಿನ ಗೋವಿಂದಪುರ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಯುವಕನನ್ನು ಗೋವಿಂದಪುರ ಮುಖ್ಯ ರಸ್ತೆಯ ನಿವಾಸಿ ಮೊಹಮ್ಮದ್ ಮಾರೂಫ್ ಶೆರಿಫ್ ಎಂದು ಗುರ್ತಿಸಲಾಗಿದೆ.
Advertisement