ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತು: MLC ಎನ್ ರವಿಕುಮಾರ್​ಗೆ ಮಧ್ಯಂತರ ರಿಲೀಫ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.
N. Ravikumar
ರವಿ ಕುಮಾರ್
Updated on

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಹೊತ್ತಿದ್ದ ಬಿಜೆಪಿ ಎಂಎಲ್‌ಸಿ ಎನ್​ ರವಿಕುಮಾರ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಶಾಲಿನಿ ರಜನೀಶ್ ದೂರು ನೀಡಿಲ್ಲ, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ.​ ಹೇಳಿಕೆಯಲ್ಲಿ ಅಪರಾಧದ ಅಂಶಗಳಿಲ್ಲವೆಂದು ಎಂಎಲ್​ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ-ಪ್ರತಿವಾದ ಬಳಿಕ ಮಧ್ಯಂತರ ತಡೆ ನೀಡಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ರಾಜಕಾರಣಿಗಳು ಹೊಸ ಬಗೆಯ ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಮೌಖಿಕವಾಗಿ ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು.

ಇಂದಿನ ವಿಚಾರಣೆಯಲ್ಲಿ ಎಂಎಲ್​ಸಿ ರವಿಕುಮಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಾಡಿದ್ದು, 3ನೇ ವ್ಯಕ್ತಿ ದೂರು ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದಿದ್ದಾರೆ.

N. Ravikumar
ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com