
ಬೆಂಗಳೂರು: ಬೆಂಗಳೂರು ದಕ್ಷಿಣ (Ramanagara) ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆ ಮಾಡಲಾಗಿದೆ. ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ 45 ವರ್ಷದ ಅಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಎಂಬಾತನ ಮೇಲೆ ಗುಂಪೊಂದು ದಾಳಿ ಮಾಡಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ತನ್ನ ಗ್ರಾಮದಲ್ಲಿನ ಜಮೀನಿನ ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ಸ್ಥಳೀಯರೊಂದಿಗೆ ನಂಜೇಶ್ ಜಗಳವಾಡಿದ್ದರು. ಇದರ ಬೆನ್ನಲ್ಲೇ ಅವರನ್ನು ಕೊಲೆ ಮಾಡಲಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ. ಮಾರಣಾಂತಕವಾಗಿ ಗಾಯಗೊಂಡಿದ್ದ ನಂಜೇಶ್ ಅವರನ್ನು ತಕ್ಷಣವೇ ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement