ರಾಜ್ಯ

'ಡಿ ಬಾಸ್‌' ಮೇಲೆ ಗೌರವ ಇರುವವರು ಯಾವುದಕ್ಕೂ ಪ್ರತಿಕ್ರಿಯಿಸದಿರಿ: ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ

ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ. ಯಾರಿಗೂ ಮೆಸೇಜ್‌ ಮಾಡಬೇಡಿ. ಪ್ರಚಾರಕ್ಕೆ ಆಗಲಿ, ಹುನ್ನಾರ ಮಾಡಲಿ, ಯಾರು ಏನೇ ಅಂದರೂ ತಲೆ ಕೆಡಸಿಕೊಳ್ಳಬೇಡಿ.

'ಡಿ ಬಾಸ್‌' ಮೇಲೆ ಗೌರವ ಇರುವವರು ಯಾವುದಕ್ಕೂ ಪ್ರತಿಕ್ರಿಯಿಸದಿರಿ: ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
ದರ್ಶನ್ ಅಭಿಮಾನಿಗಳ ಪೇಜ್
Published On :

ಬೆಂಗಳೂರು: ರೇಣುಕಾಸ್ವಾಮಿ ಕುಟುಂಬದ ಪರ ನಟಿ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್ ಕೋಪಕ್ಕೆ ಕಾರಣವಾಗಿದ್ದು, ಈ ವಿವಾದ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ.

ಈ ನಡುವೆ ದರ್ಶನ್‌ ಅಭಿಮಾನಿಗಳಿಗಾಗಿಯೇ ತೆರೆಯಲಾಗಿರುವ ಅಫಿಶಿಯಲ್‌ ಫ್ಯಾನ್ಸ್‌ ಪೇಜ್‌ ನಲ್ಲಿ ʻಡಿ ಬಾಸ್' ಮೇಲೆ ಅಭಿಮಾನ ಇರುವ ಯಾರೊಬ್ಬರೂ ಯಾವುದೇ ವಿವಾದಕ್ಕೂ ಕಿವಿಗೊಡದಂತೆ ಮನವಿ ಮಾಡಲಾಗಿದೆ.

ಡಿ ಬಾಸ್‌ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೆ ಕಿವಿಗೊಡಬೇಡಿ. ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ. ಯಾರಿಗೂ ಮೆಸೇಜ್‌ ಮಾಡಬೇಡಿ. ಪ್ರಚಾರಕ್ಕೆ ಆಗಲಿ, ಹುನ್ನಾರ ಮಾಡಲಿ, ಯಾರು ಏನೇ ಅಂದರೂ ತಲೆ ಕೆಡಸಿಕೊಳ್ಳಬೇಡಿ.

ದರ್ಶನ್ ಫ್ಯಾನ್ಸ್ ಏನೆಂದು, ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿ. ಅವಮಾನಗಳು ಇನ್ನಷ್ಟು ಕೆಲಸ ಮಾಡಲು ಮೆಟ್ಟಿಲು ಆಗಲಿ ಎಂದು ಮನವಿ ಮಾಡಲಾಗಿದೆ.

ಈ ಹಿಂದೆ ನಟಿ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆಂದು ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್​ ಮಾಡಿದ್ದಾರೆ.

ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಬಗ್ಗೆ ಖುದ್ದು ರಮ್ಯಾ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಫೋಟೋಸ್​ ಶೇರ್ ಮಾಡಿಕೊಂಡಿದ್ದರು. ಇದೀಗ ದರ್ಶನ್​ ಫ್ಯಾನ್ಸ್​ ವಿರುದ್ಧ ನಟಿ ರಮ್ಯಾ ಕಾನೂನಾತ್ಮಕವಾಗಿ ಪಾಠ ಕಲಿಸಲು ತೀರ್ಮಾನಿಸಿದ್ದಾರೆ. ಅಶ್ಲೀಲವಾಗಿ ನಿಂದಿಸುತ್ತಿರುವವರ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಲು ನಟಿ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.