ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ತನಿಖೆ ಚುರುಕು; 2ನೇ ದಿನವೂ SITಯಿಂದ ದೂರುದಾರನ ವಿಚಾರಣೆ

ಮಂಗಳೂರಿನ ಕದ್ರಿಯ ಮಲ್ಲಿಕಟ್ಟೆಯಲ್ಲಿರುವ ಪಿಡಬ್ಲ್ಯೂಡಿ ತಪಾಸಣಾ ಬಂಗಲೆಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ದೂರುದಾರನ ಹೇಳಿಕೆಯನ್ನು ಎಸ್ಐಟಿ ದಾಖಲಿಸಿಕೊಂಡಿದೆ.
complainant
ದೂರು ನೀಡಿರುವ ವ್ಯಕ್ತಿ.
Updated on

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಭಾನುವಾರ ಸತತ ಎರಡನೇ ದಿನವೂ ಸಾಕ್ಷಿ-ದೂರುದಾರನನ್ನು ವಿಚಾರಣೆ ನಡೆಸಿದೆ.

ಮಂಗಳೂರಿನ ಕದ್ರಿಯ ಮಲ್ಲಿಕಟ್ಟೆಯಲ್ಲಿರುವ ಪಿಡಬ್ಲ್ಯೂಡಿ ತಪಾಸಣಾ ಬಂಗಲೆಯಲ್ಲಿರುವ ಎಸ್‌ಐಟಿ ಶಿಬಿರ ಕಚೇರಿಯಲ್ಲಿ ದೂರುದಾರನ ಹೇಳಿಕೆಯನ್ನು ಎಸ್ಐಟಿ ದಾಖಲಿಸಿಕೊಂಡಿದೆ.

ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣಬ್ ಮೊಹಂತಿ ಕೂಡ ಬೆಳಿಗ್ಗೆ 11.45 ರ ಸುಮಾರಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿ ತನಿಖೆ ನಡೆಸಿದರು.

ನಂತರ ಸಂಜೆ, ಮೊಹಂತಿ ಮತ್ತು ಡಿಐಜಿ ಎಂಎನ್ ಅನುಚೇತ್ ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಎಸ್‌ಐಟಿ ಕಚೇರಿಗೆ ಭೇಟಿ ನೀಡಿದರು.

ದೂರುದಾರ ಶವಗಳ ಬಗ್ಗೆ ವಿವರವಾದ ಹೇಳಿಕೆ ನೀಡಿದ್ದು, ಅವರ ಹೇಳಿಕೆಯ ಆಧಾರದ ಮೇಲೆ ಎಸ್‌ಐಟಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

complainant
ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ಆರಂಭ

ನಾವು ಯಾವುದೇ ವಿಳಂಬವಿಲ್ಲದೆ ಮುಂದಿನ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ. ಸೋಮವಾರ ಬೆಳ್ತಂಗಡಿಗೆ ಭೇಟಿ ನೀಡಿ ಪ್ರಾಥಮಿಕ ಕೆಲಸ ಆರಂಭಿಸುತ್ತೇವೆ. ಸೋಮವಾರವೂ ದೂರುದಾರನ ವಿಚಾರಣೆ ಮುಂದುವರಿಯುವ ನಿರೀಕ್ಷೆಯಿದೆ. ಶವಗಳನ್ನು ಹೂಳಿರುವ ಕುರಿತು ಹಲವು ಸ್ಥಳಗಳನ್ನು ಉಲ್ಲೇಖಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಾಕ್ಷಿ-ದೂರುದಾರರ ವಿಚಾರಣೆ ಪೂರ್ಣಗೊಂಡ ನಂತರ, ಎಸ್‌ಐಟಿ ಅಧಿಕಾರಿಗಳು ಅಸ್ಥಿಪಂಜರಗಳಿರುವ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ.

ದೂರುದಾರರ ಧರ್ಮಸ್ಥಳ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತ್ಯಾಚಾರ ಮತ್ತು ಕೊಲೆಗೆ ಒಳಗಾದವರ ಶವಗಳನ್ನು ಹೂಳುವಂತೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಜುಲೈ 4 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಒಂದು ವಾರದ ನಂತರ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರಾಗಿ, ತಮ್ಮ ಹೇಳಿಕೆಯನ್ನು ದಾಖಲಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com