ಆಸ್ತಿ ತೆರಿಗೆ ಬಾಕಿ ಪಾವತಿಸದ 3.75 ಲಕ್ಷ ಸುಸ್ತಿದಾರಿಗೆ ನೋಟೀಸ್ ಜಾರಿಗೆ BBMP ಮುಂದು..!

ಸುಮಾರು 3.75 ಲಕ್ಷ ಸುಸ್ತಿದಾರರಿಂದ 700-800 ಕೋಟಿ ರೂ. ತೆರಿಗೆ ವಸೂಲಿ ಬಾಕಿ ಇದೆ. ಆಸ್ತಿ ತೆರಿಗೆ ಬಾಕಿ ಪಾವತಿಸಲು ಎಸ್‌ಎಂಎಸ್ ಮತ್ತು ಇಮೇಲ್ ಮೂಲಕ ನೋಟಿಸ್ ನೀಡಲಾಗುವುದು.
BBMP OFFICE
ಬಿಬಿಎಂಪಿ ಕಚೇರಿonline desk
Updated on

ಬೆಂಗಳೂರು: ಬಾಕಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರಿಗೆ ನೋಟೀಸ್ ಜಾರಿ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್ ಅವರು, ಆಸ್ತಿ ತೆರಿಗೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುಮಾರು 3.75 ಲಕ್ಷ ಸುಸ್ತಿದಾರರಿಂದ 700-800 ಕೋಟಿ ರೂ. ತೆರಿಗೆ ವಸೂಲಿ ಬಾಕಿ ಇದೆ. ಆಸ್ತಿ ತೆರಿಗೆ ಬಾಕಿ ಪಾವತಿಸಲು ಎಸ್‌ಎಂಎಸ್ ಮತ್ತು ಇಮೇಲ್ ಮೂಲಕ ನೋಟಿಸ್ ನೀಡಲಾಗುವುದು ಎಂದು ಹೇಳಿದರು.

ಹೊಸ ಖಾತಾಗಳಿಗಾಗಿ ಪಾಲಿಕೆಗೆ 50,000 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಆದ್ಯತೆಯ ಆಧಾರದ ಮೇಲೆ ಈ ವಿಷಯವನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎ-ಖಾತಾಗಳನ್ನು ನೀಡುವ ಸಲುವಾಗಿ ಕರ್ನಾಟಕ ಸರ್ಕಾರವು ಆದೇಶದ ಹೊರಡಿಸಿದೆ. ಅದರಂತೆ, ನಾಗರಿಕರು ಎ-ಖಾತಾಗೆ ಅರ್ಜಿ ಸಲ್ಲಿಸುವ ಸಲುವಾಗಿ ಶೀಘ್ರ ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದರು.

ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಆದ್ಯತೆಯ ಮೇಲೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ವಾರ್ಡ್ ರಸ್ತೆಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮಳೆಗಾಲದ ವೇಳೆ ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಅನ್ನು ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.

BBMP OFFICE
ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: A, B-Khata ನಿಯಮಗಳಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ ಅಸ್ತು!

ಮಳೆಗಾಲದ ವೇಳೆ ಯಾವುದೇ ರಸ್ತೆಗಳಲ್ಲಿ ಜಲಾವೃತವಾಗದಂತೆ ನೋಡಿಕೊಳ್ಳಬೇಕು. ಶಿಲ್ಟ್ ಆ್ಯಂಡ್ ಟ್ರ್ಯಾಕ್ಟರ್ ಗಳ ಮೂಲಕ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳು, ಗ್ರೇಟಿಂಗ್‌ಗಳ ಬಳಿ ಸ್ವಚ್ಛತೆ ಮಾಡಿ ರಸ್ತೆ ಮೇಲೆ ಬೀಳುವ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಬೇಕು. ಕಳೆದ ಒಂದು ವಾರದಲ್ಲಿ 69 ಪ್ರಕರಣಗಳು ಪತ್ತೆಯಾಗಿದ್ದು, ಜುಲೈ ತಿಂಗಳಲ್ಲಿ 442 ಪ್ರಕರಣಗಳು ಪತ್ತೆಯಾಗಿವೆ. 2025ನೇ ಜನವರಿಯಿಂದ ಇಲ್ಲಿಯವರೆಗೆ 1,685 ಪ್ರಕರಣಗಳು ಪತ್ತೆಯಾಗಿದೆ. ಈ ಸಂಬಂಧ ಲಾರ್ವಾ ಉತ್ಪತ್ತಿ ಆಗುವ ತಾಣಗಳನ್ನು ಗುರುತಿಸಿ ಔಷಧಿ ಸಿಂಪರಣೆ ಮಾಡಿ ನಿರ್ಮೂಲನೆ ಮಾಡಬೇಕು. ಜೊತೆಗೆ ಡೆಂಗ್ಯೂ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವಯಂಸೇವಕರನ್ನು ನಿಯೋಜಿಸಿಕೊಂಡು, ಮನೆ-ಮನೆಗೆ ಭೇಟಿ ನೀಡಿ ಅರಿವು ಮೂಡಿಸುವ ಕೆಲಸ ಮಾಡಬೇಕು.

ಸೊಳ್ಳೆಗಳನ್ನು ನಿಯಂತ್ರಿಸುವ ಸಲುವಾಗಿ ಪ್ರತಿ ಮನೆಗೆ ಓವಿ ಟ್ರ್ಯಾಪ್‌ಗಳನ್ನು ಅಳವಡಿಸಿಕೊಳ್ಳಲು ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಹೆಚ್ಚು ಪ್ರಕರಣಗಳು ಕಂಡುಬರುವ ಕಡೆ ಸಮೀಕ್ಷೆ ನಡೆಸಿ ಸೊಳ್ಳೆಗಳ ನಿರ್ಮೂಲನೆ ಮಾಡಬೇಕು. ನಿರಂತರವಾಗಿ ಫಾಗಿಂಗ್ ಮತ್ತು ಔಷಧ ಸಿಂಪಡಣೆ ಕಾರ್ಯ ನಡೆಸಲು ಸೂಚಿಸಿದರು. ಇದೇ ವೇಳೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಮನ್ವಯ ಮಾಡಿಕೊಂಡು ಐ.ಇ.ಸಿ ಚಟುವಟಿಕೆಗನ್ನು ನಡೆಸುವ ಮೂಲಕ ಡೆಂಗ್ಯೂ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕರೀಗೌಡ, ಡಾ.ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರಿತಿ ಗೆಹ್ಲೋಟ್, ಎಲ್ಲಾ ವಲಯ ಆಯುಕ್ತರು, ಎಲ್ಲಾ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com