
ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಇಂದು ರಮ್ಯಾ ಬೆಂಗಳೂರು ಪೊಲೀಸ್ ಕಮಿಷನರ್ ಗೆ ತನಗೆ ಅಶ್ಲೀಲ ಸಂದೇಶ ಬಂದಿದ್ದ 43 ಖಾತೆಗಳನ್ನು ಉಲ್ಲೇಖಿಸಿ 4 ಪುಟಗಳ ದೂರು ನೀಡಿದ್ದರು. ಹೀಗಾಗಿ ಕೇಂದ್ರ ಅಪರಾಧ ವಿಭಾಗದ ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಎಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.
ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ ಅವರು, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
Advertisement